ಸಡಗರದ ಶ್ರೀನಿವಾಸ ಕಲ್ಯಾಣೋತ್ಸವ

7

ಸಡಗರದ ಶ್ರೀನಿವಾಸ ಕಲ್ಯಾಣೋತ್ಸವ

Published:
Updated:
Deccan Herald

ಚಿಕ್ಕಬಳ್ಳಾಪುರ: ನಗರದ ಗಂಗಮ್ಮಗುಡಿ ರಸ್ತೆಯ ಪೇಟೆ ಆಂಜನೇಯಸ್ವಾಮಿ ಮತ್ತು ವಾಸವಿ ದೇವಾಲಯದಲ್ಲಿ ಶನಿವಾರ ಸಡಗರ, ಶ್ರದ್ಧಾಭಕ್ತಿಯಿಂದ ಶ್ರೀನಿವಾಸ ಕಲ್ಯಾಣೋತ್ಸವ ನೆರೆವೇರಿತು.

ಕಲ್ಯಾಣೋತ್ಸವ ಪ್ರಯುಕ್ತ ದೇವಾಲಯದಲ್ಲಿ ಬೆಳಿಗ್ಗೆಯಿಂದಲೇ ಸುಪ್ರಭಾತ ಸೇವೆ, ಮಹಾಭಿಷೇಕ ಸೇರಿದಂತೆ ಅನೇಕ ಧಾರ್ಮಿಕ ಕೈಂಕರ್ಯಗಳು ನಡೆದವು. ಸಂಜೆ ವಾಸವಿ ಧರ್ಮಶಾಲೆಯಲ್ಲಿ ನಡೆದ ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ನೂರಾರು ಭಕ್ತರು ಭಾಗವಹಿಸಿ ಪೂಜೆ ಸಲ್ಲಿಸಿ, ಸಂಕಲ್ಪ ಮಾಡಿದರು. ದೇವಾಲಯದಲ್ಲಿ ತೀರ್ಥ, ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !