ವಿದ್ಯುತ್ ಪ್ರವಹಿಸಿ ಇಬ್ಬರ ಸಾವು

7

ವಿದ್ಯುತ್ ಪ್ರವಹಿಸಿ ಇಬ್ಬರ ಸಾವು

Published:
Updated:

ಚಿಂತಾಮಣಿ: ತಾಲ್ಲೂಕಿನ ವಡ್ಡಹಳ್ಳಿಯಲ್ಲಿ ಭಾನುವಾರ ಸಂಜೆ ತೋಟವೊಂದರಲ್ಲಿ ಕೊಳವೆ ಬಾವಿಗೆ ಪಂಪ್ ಮತ್ತು ಮೋಟರ್ ಅಳವಡಿಸುವಾಗ ಕಬ್ಬಿಣದ ಪೈಪ್ 11 ಕೆ.ವಿ ಮಾರ್ಗದ ತಂತಿಗಳಿಗೆ ತಗುಲಿ ವಿದ್ಯುತ್ ಪ್ರವಹಿಸಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗ್ರಾಮದ ಗೋಪಾಲಪ್ಪ ಎಂಬುವರ ತೋಟದಲ್ಲಿ ಟ್ರ್ಯಾಕ್ಟರ್‌ ಮೂಲಕ ಪಂಪ್ ಮತ್ತು ಮೋಟರ್ ಇಳಿಸುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಟ್ರ್ಯಾಕ್ಟರ್‌ನಲ್ಲಿದ್ದ ದೊಡ್ಡ ಗಂಜೂರು ನಿವಾಸಿಗಳಾದ ವೆಂಕಟರೆಡ್ಡಿ ಮತ್ತು ವಿನೋದ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ತೋಟದ ಮಾಲೀಕ ಗೋಪಾಲಪ್ಪ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಕೋಲಾರದ ಎಸ್‌ಎನ್‌ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬೆಸ್ಕಾಂ ಅಧಿಕಾರಿಗಳು ಮತ್ತು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !