ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೀವನದಲ್ಲಿ ತೃಪ್ತಿ, ನೆಮ್ಮದಿ ಮುಖ್ಯ

ಕೆ.ವಿ. ಮತ್ತು ಪಂಚಗಿರಿ ಶಿಕ್ಷಣ ದತ್ತಿ ನೌಕರರಿಗೆ ಸಾಂಸ್ಕೃತಿಕ ಸ್ಪರ್ಧೆಗಳು
Last Updated 20 ಜುಲೈ 2019, 14:39 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಮನುಷ್ಯನ ಜೀವನದಲ್ಲಿ ತೃಪ್ತಿ, ನೆಮ್ಮದಿ ಅವಶ್ಯಕ. ಒತ್ತಡದ ಇಂದಿನ ದಿನಗಳಲ್ಲಿ ಪ್ರತಿಯೊಬ್ಬರೂ ಮನಸ್ಸಿಗೆ ಮುದ ನೀಡುವ ವಿವಿಧ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ’ ಎಂದು ಕೆ.ವಿ. ಮತ್ತು ಪಂಚಗಿರಿ ಶಿಕ್ಷಣ ದತ್ತಿ ಅಧ್ಯಕ್ಷ ಕೆ.ವಿ.ನವೀನ್ ಕಿರಣ್ ಹೇಳಿದರು.


ಕೆ.ವಿ ಮತ್ತು ಪಂಚಗಿರಿ ಟ್ರಸ್ಟ್ ಸಮೂಹ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷ ಸಿ. ವಿ. ವೆಂಕಟರಾಯಪ್ಪನವರ ಜನ್ಮ ದಿನಾಚರಣೆ ಹಾಗೂ 23ನೇ ದತ್ತಿ ದಿನಾಚರಣೆಯ ಅಂಗವಾಗಿ ನಗರದ ಪಂಚಗಿರಿ ಪ್ರೌಢ ಶಾಲೆಯ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ನೌಕರರ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.


‘ನಮ್ಮ ಸಮೂಹ ವಿದ್ಯಾಸಂಸ್ಥೆಗಳ ಪ್ರತಿಯೊಬ್ಬ ನೌಕರರೂ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ನಾವೆಲ್ಲಾ ಒಂದೇ ಎಂಬ ಸಮಾನತೆಯ ಭಾವ ಮೂಡಿಸುವ ಅವಶ್ಯಕತೆಯನ್ನು ಮನಗಂಡ ವೆಂಕಟರಾಯಪ್ಪನವರ ದೂರದರ್ಶಿತ್ವದ ಫಲವಾಗಿ ದತ್ತಿ ದಿನಾಚರಣೆ ಕಾರ್ಯಕ್ರಮ ಆಯೋಜಿಸುತ್ತ ಬರಲಾಗುತ್ತಿದೆ’ ಎಂದು ತಿಳಿಸಿದರು.


‘ದತ್ತಿಗಳ ಸದಸ್ಯ ಬಿ. ಮುನಿಯಪ್ಪ ತಮ್ಮ 91ನೇ ಇಳಿವಯಸ್ಸಿನಲ್ಲಿಯೂ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಾರೆ. ಅವರ ಹುಮ್ಮಸ್ಸು ಎಲ್ಲರಿಗೂ ಮಾರ್ಗದರ್ಶನವಾಗಬೇಕು. ಇದೇ 25ರಂದು ನಡೆಯಲಿರುವ ಬೃಹತ್ ರಕ್ತದಾನ ಶಿಬಿರದಲ್ಲಿ ಪ್ರತಿಯೊಬ್ಬರೂ ಪಾಲ್ಗೊಂಡು ಜೀವ ಉಳಿಸುವ ಅಮೂಲ್ಯ ಕಾರ್ಯದ ಪಾಲುದಾರರಾಗಬೇಕು’ ಎಂದರು.


ದತ್ತಿ ಸದಸ್ಯ ಬಿ. ಮುನಿಯಪ್ಪ ಮಾತನಾಡಿ, ‘ಹಣದಾಸೆಗಾಗಿ ಶಿಕ್ಷಣ ಸಂಸ್ಥೆಗಳನ್ನು ಪ್ರಾರಂಭಿಸುವ ಇತ್ತೀಚಿನ ಪ್ರವೃತ್ತಿ ಸಮಾಜಕ್ಕೆ ಮಾರಕವಾಗುತ್ತಿದೆ. ಈ ಭಾಗದ ಜನರ ಅನುಕೂಲಕ್ಕಾಗಿ ಸಿ.ವಿ.ವೆಂಕಟರಾಯಪ್ಪನವರು ಸುಮಾರು ಐವತ್ತು ವರ್ಷಗಳ ಹಿಂದೆಯೇ ನಿಸ್ವಾರ್ಥದಿಂದ ವಿದ್ಯಾಸಂಸ್ಥೆಗಳನ್ನು ಸ್ಥಾಪಿಸಿ, ಲಕ್ಷಾಂತರ ವಿದ್ಯಾರ್ಥಿಗಳು ವಿದ್ಯಾವಂತರನ್ನಾಗಿ ಮಾಡಿದ ಕೀರ್ತಿ ಅವರಿಗೆ ಸಲ್ಲಸಬೇಕು’ ಎಂದು ಹೇಳಿದರು.


ಕಾರ್ಯಕ್ರಮದಲ್ಲಿ ಸಮೂಹ ಗಾಯನ, ಹಾಡುಗಾರಿಕೆ, ಏಕಪಾತ್ರಾಭಿನಯ ಮುಂತಾದ ಸಾಂಸ್ಕೃತಿಕ ಸ್ಪರ್ಧೆಗಳು ನಡೆದವು. ಇತ್ತೀಚೆಗೆ ನಿಧನರಾದ ದತ್ತಿ ಸದಸ್ಯ ಎ. ಕೊಂಡಪ್ಪ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ದತ್ತಿ ಸದಸ್ಯರಾದ ನಿರ್ಮಲಾ ಪ್ರಭು, ವಿಜಯಲಕ್ಷ್ಮಿ, ಲಕ್ಷ್ಮಣಸ್ವಾಮಿ, ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಎಂ.ನಾರಾಯಣಸ್ವಾಮಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT