ಶನಿವಾರ, ಡಿಸೆಂಬರ್ 14, 2019
24 °C
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ: ಗುರುವಾರ ನಾಮಪತ್ರ ಹಿಂಪಡೆಯಲು ಕೊನೆ ದಿನ

9 ನಾಮಪತ್ರ ಕ್ರಮಬದ್ಧ, 6 ತಿರಸ್ಕೃತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ 15 ಅಭ್ಯರ್ಥಿಗಳಿಂದ ಸಲ್ಲಿಕೆಯಾಗಿದ್ದ 21 ನಾಮಪತ್ರಗಳ ಪರಿಶೀಲನೆ ಕಾರ್ಯ ಮಂಗಳವಾರ ನಡೆಯಿತು. ಒಂಬತ್ತು ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧಗೊಂಡು, ಆರು ಅಭ್ಯರ್ಥಿಗಳ ಉಮೇದುವಾರಿಕೆ ತಿರಸ್ಕೃತಗೊಂಡವು.

ಕಾಂಗ್ರೆಸ್ ಅಭ್ಯರ್ಥಿ ಎಂ.ಅಂಜನಪ್ಪ, ಜೆಡಿಎಸ್‌ ಅಭ್ಯರ್ಥಿ ರಾಧಾಕೃಷ್ಣ, ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್, ಬಹುಜನ ಸಮಾಜ ಪಕ್ಷದ ಅಭ್ಯರ್ಥಿ ಡಿ.ಆರ್. ನಾರಾಯಣಸ್ವಾಮಿ, ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿ ಎಸ್.ವಿ. ಫಣೀರಾಜ್, ಪಕ್ಷೇತರ ಅಭ್ಯರ್ಥಿಗಳಾದ ದಿಲ್‍ಶಾದ್ ಬೇಗಂ, ಮೆಹಬೂಬ್ ಪಾಷ, ಡಿ. ಮುನಿರಾಜು, ಸೈಯದ್ ಆಸೀಫ್ ಅವರ ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಚುನಾವಣಾಧಿಕಾರಿ ರಘುನಂದನ್ ತಿಳಿಸಿದರು.

ಜೆಡಿಎಸ್‌ನ ಎರಡನೇ ಅಭ್ಯರ್ಥಿ ಕೆ.ಪಿ.ಬಚ್ಚೇಗೌಡ, ಕಾಂಗ್ರೆಸ್ ಅಭ್ಯರ್ಥಿ ಕೆ.ಎನ್.ಕೇಶವರೆಡ್ಡಿ, ಬಹುಜನ ಮುಕ್ತಿ ಪಕ್ಷದ ಅಭ್ಯರ್ಥಿ ಖಾಸಿಂಸ್ವಾಮಿ, ಪಕ್ಷೇತರ ಅಭ್ಯರ್ಥಿಗಳಾದ ಎನ್.ವೆಂಕಟೇಶಪ್ಪ, ಜಿ.ಎನ್.ರವಿ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿ ಎನ್.ನರಸಿಂಹಮೂರ್ತಿ ಅವರ ನಾಮಪತ್ರಗಳು ತಾಂತ್ರಿಕ ಕಾರಣದಿಂದ ತಿರಸ್ಕೃತಗೊಂಡಿವೆ ಎಂದು ಹೇಳಿದರು.

ಗುರುವಾರ (ನ.21) ನಾಮಪತ್ರ ಹಿಂಪಡೆಯಲು ಕೊನೆ ದಿನ. ಡಿಸೆಂಬರ್ 5 ರಂದು ಮತದಾನ ನಡೆಯಲಿದೆ. ಡಿ.9 ರಂದು ಮತ ಎಣಿಕೆ ನಡೆದು ಫಲಿತಾಂಶ ಘೋಷಣೆಯಾಗಲಿದೆ.

ಪ್ರತಿಕ್ರಿಯಿಸಿ (+)