ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಡವರಿಗೆ ಇನ್ನೂ ಸಿಗದ ನಿವೇಶನ

ಅಧಿಕಾರಿಗಳ ವಿರುದ್ಧ ಶಾಸಕ ಸುಬ್ಬಾರೆಡ್ಡಿ ಅಸಮಾಧಾನ
Last Updated 8 ಅಕ್ಟೋಬರ್ 2022, 6:11 IST
ಅಕ್ಷರ ಗಾತ್ರ

ಬಾಗೇಪಲ್ಲಿ: ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು 25 ಪಿಡಿಒ ಹಾಗೂ ಕಂದಾಯ ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಬಡ ಜನರಿಗೆ ನಿವೇಶನ ಹಂಚಿಕೆಯಾಗಿಲ್ಲ ಎಂದು ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ವಿಚಾರಕ್ಕೆ ಸಂಬಂಧಿಸಿ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಎಚ್.ಎನ್.ಮಂಜುನಾಥಸ್ವಾಮಿ, ಪಂಚಾಯಿತಿ ಅಧಿಕಾರಿಗಳ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದರು.

ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅಧ್ಯಕ್ಷತೆಯಲ್ಲಿ ಹಮ್ಮಿಕೊಂಡಿದ್ದ ಆಶ್ರಯ ಸಮಿತಿ ಯೋಜನೆಗಳಲ್ಲಿನ ಪಂಚಾಯಿತಿವಾರು ಕಾರ್ಯ ಪ್ರಗತಿ ಬಗ್ಗೆ ಕಂದಾಯ, ಪಂಚಾಯಿತಿ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ತಾಲ್ಲೂಕಿನಲ್ಲಿ ಈವರೆಗೆ 350 ಮಂದಿ ನಿವೇಶನ ರಹಿತರಿಗೆ ನಿವೇಶನ ಹಂಚಿಕೆಯಾಗಿದೆ. 25 ಗ್ರಾಮ ಪಂಚಾಯಿತಿಗಳಲ್ಲಿ 3 ಸಾವಿರಕ್ಕೂ ಹೆಚ್ಚು ಮಂದಿ ನಿವೇಶನ ರಹಿತರು ಇದ್ದಾರೆ. ಅನೇಕ ಆಶ್ರಯ ಸಮಿತಿಗಳ ಅಧಿಕಾರಿಗಳ ಸಭೆ ನಡೆಸಲಾಗಿದೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಕಂದಾಯ ಅಧಿಕಾರಿಗಳಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಗ್ರಾಮಗಳು, ನಿವೇಶನ ರಹಿತರ ಮಾಹಿತಿಯೇ ಗೊತ್ತಿಲ್ಲ ಎಂದು ಕಿಡಿಕಾರಿದರು.

ಸರ್ಕಾರಿ ಜಾಗ, ಖರಾಬು, ಗೋಮಾಳಜಾಗ ಗುರುತಿಸಿ ಎಂದು ಅನೇಕಸಲ ತಾಲ್ಲೂಕು ಪಂಚಾಯಿತಿ ಸಭೆಗಳಲ್ಲಿ ಸೂಚನೆ ನೀಡಲಾಗಿದೆ. ಆದರೆ, ಈವರೆಗೆ ಅಧಿಕಾರಿಗಳ ಬಳಿ ಸರ್ಕಾರಿಜಮೀನುಗಳನ್ನು ನಿವೇಶನ ರಹಿತರಿಗೆ ಹಂಚಿಕೆ ಮಾಡಲುಸಾಧ್ಯವಾಗಿಲ್ಲ ಎಂದು ಬೇಸರವ್ಯಕ್ತಪಡಿಸಿದರು.

ಅಕ್ಟೋಬರ್ 14ರಂದು ಆಶ್ರಯ ಸಮಿತಿಗಳ ಕಾರ್ಯ ಪ್ರಗತಿ ಸಭೆ ಕರೆಯಲಾಗಿದೆ. 25 ಗ್ರಾಮ ಪಂಚಾಯಿತಿಗಳು ಹಾಗೂ ಕಂದಾಯ ಅಧಿಕಾರಿಗಳು ನಿವೇಶನಗಳು ಹಂಚಿಕೆ ಮಾಡಲು ಸರ್ಕಾರಿ ಜಾಗ ಗುರುತಿಸಿದ ನಿವೇಶನ ರಹಿತರ ಪಟ್ಟಿಯನ್ನು ಸಭೆಗೆ ತರಬೇಕು. ಇಲ್ಲವಾದರೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳಳ ಕಚೇರಿಯಲ್ಲಿ ಅಧಿಕಾರಿಗಳನ್ನು ಕರೆಯಿಸಿ ಸಭೆ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ತಹಶೀಲ್ದಾರ್ ವೈ.ರವಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಚ್.ಎನ್.ಮಂಜುನಾಥಸ್ವಾಮಿ, ಗುಡಿಬಂಡೆ ಇಒ ಬಿ.ಎನ್.ರವೀಂದ್ರ, ಆಶ್ರಯ ಯೋಜನೆ ಅಧಿಕಾರಿ ರಂಗಪ್ಪ, ಭೂ ದಾಖಲೆಗಳ ಸಹಾಯಕ ನಿದೇರ್ಶಕ ಆಂಜನೇಯ, ಬಾಗೇಪಲ್ಲಿ, ಗುಡಿಬಂಡೆ ತಾಲ್ಲೂಕುಗಳ ಪಂಚಾಯಿತಿ ಅಭಿವೃದ್ಧಿ ಹಾಗೂ ಕಂದಾಯ ಅಧಿಕಾರಿಗಳು, ಅಧ್ಯಕ್ಷರು ಹಾಜರಿದ್ದರು.

ತಾಲ್ಲೂಕಿನ 25 ಗ್ರಾಮ ಪಂಚಾಯಿತಿ, ಕಂದಾಯ ಅಧಿಕಾರಿಗಳು ಸರ್ಕಾರಿ ಜಾಗಗುರುತಿಸಿದ, ನಿವೇಶನ ರಹಿತರ ಪಟ್ಟಿ, ತೊಂದರೆ ಇರುವ ಹಾಗೂ ನ್ಯಾಯಾಲಯದಲ್ಲಿ ದಾವೆ ಹೂಡಿರುವ ಬಗ್ಗೆ ಆಶ್ರಯ ಯೋಜನೆಗಳ ಕಾರ್ಯ ಪ್ರಗತಿಯನ್ನು ಸಭೆಯಲ್ಲಿಮಂಡಿಸಿದರು.

ಅತಿಕ್ರಮಣಕಾರಿತೆರವುಗೊಳಿಸಿ

ತಾಲ್ಲೂಕಿನ ದೇವರಗುಡಿಪಲ್ಲಿ ಗ್ರಾಮ ಪಂಚಾಯಿತಿಯವ್ಯಾಪ್ತಿಯಲ್ಲಿ ಸರ್ಕಾರಿ ಗೋಮಾಳವನ್ನು ಕೆಲವರು ಅತಿಕ್ರಮಿಸಿ ಬಡಾವಣೆಗಳನ್ನು ನಿರ್ಮಿಸಿದರೂ, ತಹಶೀಲ್ದಾರ್, ಇಒ ಹಾಗೂ ಪಂಚಾಯಿತಿ, ಕಂದಾಯ ಅಧಿಕಾರಿಗಳು ಕ್ರಮ ಜರುಗಿಸಿಲ್ಲ. ಸರ್ಕಾರಿ ಜಮೀನು ಅತಿಕ್ರಮಣ ಮಾಡಿದವರಿಗೆ ನೋಟಿಸ್ ನೀಡಿಲ್ಲ.

ಪಟ್ಟಣದ ಹೊರವಲಯದ ಘಂಟಂವಾರಿಪಲ್ಲಿ, ದೇವರಗುಡಿಪಲ್ಲಿ, ಪರಗೋಡು ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಗೋಮಾಳವನ್ನು ಅತಿಕ್ರಮಣ ಮಾಡಿದ ಸ್ಥಳದಲ್ಲಿ ಸಮೀಕ್ಷೆ ನಡೆಸಿ, ಅತಿಕ್ರಮಣ ಮಾಡಿದವರಿಗೆ ನೋಟಿಸ್ ಜಾರಿ ಮಾಡಬೇಕು. ಆ ಜಾಗವನ್ನು ವಶಕ್ಕೆ ಪಡೆಯಬೇಕು ಎಂದು ಅಧಿಕಾರಿಗಳಿಗೆ ಶಾಸಕ ಸುಬ್ಬಾರೆಡ್ಡಿ ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT