ಗೌರಿಬಿದನೂರು: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ತುಂಬು ಗರ್ಭಿಣಿಯೊಬ್ಬರು ಬುಧವಾರ ತಡರಾತ್ರಿ ಗೌರಿಬಿದನೂರು ರೈಲ್ವೆ ನಿಲ್ದಾಣದಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ.
ಕಲಬುರಗಿಯ ಚಿತ್ತಾಪುರ ತಾಲ್ಲೂಕಿನ ದಿಗ್ಗಾಂವ ಗ್ರಾಮದ ಕೆ. ಚಂದ್ರಮ್ಮ (32) ಬೆಂಗಳೂರಿನಿಂದ ನಾಂದೇಡ್ ಎಕ್ಸ್‌ಪ್ರೆಸ್‌ನಲ್ಲಿ ಊರಿಗೆ ಹೊರಟಿದ್ದರು.
ರೈಲು ಯಲಹಂಕ ತಲುಪಿದಾಗ ಹೆರಿಗೆ ನೋವು ಕಾಣಿಸಿಕೊಂಡಿದೆ. ರೈಲ್ವೆ ಅಧಿಕಾರಿಗಳು ಮುಂದಿನ ಗೌರಿಬಿದನೂರು ರೈಲ್ವೆ ನಿಲ್ದಾಣಕ್ಕೆ ಮಾಹಿತಿ ತಲುಪಿಸಿದ್ದರು.
ರೈಲು ರಾತ್ರಿ 1.30ಕ್ಕೆ ಗೌರಿಬಿದನೂರು ರೈಲು ನಿಲ್ದಾಣ ತಲುಪಿದಾಗ ಅಲ್ಲಿ ಸರ್ಕಾರಿ ಆಸ್ಪತ್ರೆ ವೈದ್ಯಕೀಯ ಸಿಬ್ಬಂದಿ ಆಂಬುಲೆನ್ಸ್‌ನೊಂದಿಗೆ ಕಾಯುತ್ತಿದ್ದರು. ಆದರೆ, ರೈಲಿನಿಂದ ಮಹಿಳೆಯನ್ನು ಕೆಳಗಿಳಿಸಿಕೊಂಡ ತಕ್ಷಣ ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿಯೇ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದರು.
‘ತಾಯಿ ಮತ್ತು ಅವಳಿ ಮಕ್ಕಳನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದ್ದು, ಆರೋಗ್ಯವಾಗಿದ್ದಾರೆ’ ಎಂದು ಆಸ್ಪತ್ರೆ ಸಿಬ್ಬಂದಿ ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.