ಬುಧವಾರ, ನವೆಂಬರ್ 25, 2020
25 °C

ಮತ್ತೊಮ್ಮೆ ಹೆಣ್ಣಾಗಲಿದೆ ಎಂದು ಮನೆಯಲ್ಲೇ ಗರ್ಭಪಾತ ಮಾಡಿಸಿಕೊಂಡ ಮಹಿಳೆ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗೇಪಲ್ಲಿ: ಗಂಡು ಮಗು ಬೇಕು ಎಂದು ಕಾನೂನು ಬಾಹಿರವಾಗಿ ಲಿಂಗಪರೀಕ್ಷೆ ಮಾಡಿಸಿಕೊಂಡ ಮಹಿಳೆಯೊಬ್ಬರಿಗೆ ಮತ್ತೊಮ್ಮೆ ಹೆಣ್ಣು ಆಗಲಿದೆ ಎಂದು ಗೊತ್ತಾಗಿದೆ. ಆ ಭಯದಿಂದ, ಪಟ್ಟಣದ ಹೊರವಲಯದ ಕೊತ್ತಪಲ್ಲಿ ಗ್ರಾಮದ ಮನೆಯಲ್ಲಿಯೇ ಗರ್ಭಪಾತ ಮಾಡಿಸಿಕೊಂಡು ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ.

ಇದನ್ನು ಓದಿ: ಸಂಪಾದಕರ ಮಾತು | ಪ್ರಜಾವಾಣಿ ಆಂಡ್ರಾಯ್ಡ್ ಮತ್ತು ಐಒಎಸ್ ಆ್ಯಪ್ ಲೋಕಾರ್ಪಣೆ

ಶ್ರೀಕನ್ಯಾ(28) ಮೃತಪಟ್ಟವರು. ತಾಲ್ಲೂಕಿನ ಪರಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊತ್ತಪಲ್ಲಿ ಗ್ರಾಮದಲ್ಲಿ ಶ್ರೀಕನ್ಯಾ ಹಾಗೂ ಪತಿ ಸೋಮಶೇಖರ್ ವಾಸವಾಗಿದ್ದಾರೆ. ಇವರಿಗೆ ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ. ಮೂರನೇ ಮಗು ಗಂಡು ಬೇಕು ಎಂದು ಪತಿ ಸೋಮಶೇಖರ್ ಹಾಗೂ ಕುಟುಂಬದವರು ಶ್ರೀಕನ್ಯಾಗೆ ಈ ಹಿಂದೆ ಗರ್ಭಪಾತ ಮಾಡಿಸಿದ್ದಾರೆ. ನ.16ರಂದೂ ಶ್ರೀಕನ್ಯಾರವರಿಗೆ ಮತ್ತೊಮ್ಮೆ ಮನೆಯಲ್ಲಿಯೇ ಗರ್ಭಪಾತ ಮಾಡಿಸಿದ್ದಾರೆ. ಇದರಿಂದ ತೀವ್ರ ರಕ್ತಸ್ರಾವ ಉಂಟಾಗಿದೆ. ಆರೋಗ್ಯದಲ್ಲಿ ಏರುಪೇರು ಆಗಿರುವುದರಿಂದ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಗುರುವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳುವ ಲಿಂಕ್: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು