ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜ್ಯಪಾಲರ ಅಧಿಕಾರ ದುರುಪಯೋಗ: ಸಿಪಿಎಂ ಆರೋಪ

Published : 3 ಆಗಸ್ಟ್ 2024, 14:08 IST
Last Updated : 3 ಆಗಸ್ಟ್ 2024, 14:08 IST
ಫಾಲೋ ಮಾಡಿ
Comments

ಬಾಗೇಪಲ್ಲಿ: ‘ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣದ ಆರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ಶೋಕಾಸ್ ನೋಟಿಸ್ ಜಾರಿ ಮಾಡಿರುವುದು ರಾಜಕೀಯ ಪ್ರೇರಿತ. ಬಿಜೆಪಿ ರಾಜಭವನವನ್ನು ದುರುಪಯೋಗ ಮಾಡಿಕೊಂಡಿದೆ’ ಎಂದು ಸಿಪಿಎಂ ಜಿಲ್ಲಾ ಸಮಿತಿ ಎಂ.ಪಿ.ಮುನಿವೆಂಕಟಪ್ಪ ಹೇಳಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಆರ್‌ಟಿಐ ಕಾರ್ಯಕರ್ತರೊಬ್ಬರ ಮನವಿ ಮೇರೆಗೆ ರಾಜ್ಯಪಾಲರು ದಿಢೀರನೆ ಮುಖ್ಯಮಂತ್ರಿಗೆ ನೋಟಿಸ್ ಜಾರಿ ಮಾಡಿರುವುದು ಪ್ರಜಾಸತ್ತಾತ್ಮಕ ಶಕ್ತಿಗಳಲ್ಲಿ ಆತಂಕ ಮೂಡಿಸಿದೆ. ವಿಧಾನಸಭೆಯಲ್ಲಿ ಹಾಗೂ ನೇರ ರಾಜ್ಯಪಾಲರಿಗೆ ನೇರವಾದ ಮಾಹಿತಿಯನ್ನು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ವಿವರ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆಗೆ ಕ್ರಮ ವಹಿಸಿದಾಗಲೂ ರಾಜ್ಯಪಾಲರು ಅವಸರದಲ್ಲಿ ಪ್ರಜಾಸತ್ತಾತ್ಮಕ ರೀತಿಯಲ್ಲಿ ಆಯ್ಕೆಯಾದ ಸರ್ಕಾರ ಪ್ರತಿನಿಧಿಸುವ ಮುಖ್ಯಮಂತ್ರಿಗೆ ನೋಟಿಸ್ ನೀಡಿರುವುದು ರಾಜ್ಯಪಾಲರ ಹುದ್ದೆಗೆ ತಕ್ಕುದಲ್ಲ. ಇದು ಸ್ಪಷ್ಟವಾಗಿ ಅಧಿಕಾರದ ದುರುಪಯೋಗ’ ಎಂದು ತಿಳಿಸಿದರು.

‘ರಾಜ್ಯಪಾಲರ ಕಚೇರಿಯನ್ನು ಬಿಜೆಪಿ ಹಾಗೂ ಮಿತ್ರಪಕ್ಷಗಳು ದುರುಪಯೋಗ ಪಡಿಸಿಕೊಂಡಿವೆ. ರಾಜ್ಯದ ಜನರು ಬರಗಾಲ, ಬೆಲೆ ಏರಿಕೆ, ನಿರುದ್ಯೋಗದಿಂದ ತೊಂದರೆ ಪಡುವ ಸಂದರ್ಭದಲ್ಲಿ ಬಿಜೆಪಿ, ವಿಪಕ್ಷಗಳು ರಾಜ್ಯ ಸರ್ಕಾರದ ನಡೆಯನ್ನು ಜನಪರವಾಗಿ ಬದಲಾಯಿಸಬೇಕಾಗಿತ್ತು. ಸಂಕಷ್ಟದಲ್ಲಿ ಇರುವವರಿಗೆ ನೆರವಾಗಬೇಕು. ಬಿಜೆಪಿ, ವಿಪಕ್ಷಗಳು ಗಮನವನ್ನು ಬೇರೆ ಕಡೆಗೆ ಸೆಳೆಯುವ ಕುತಂತ್ರ ಮಾಡಿದೆ’ ಎಂದು ಆರೋಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT