ಶನಿವಾರ, ಅಕ್ಟೋಬರ್ 16, 2021
22 °C

ಚಿಕ್ಕಬಳ್ಳಾಪುರ: ಇಂದಿನಿಂದ ಎಸಿಬಿ ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳದಿಂದ ಅ. 8ರಂದು ಬೆಳಿಗ್ಗೆ 11ರಿಂದ 1ರವರೆಗೆ ಗೌರಿಬಿದನೂರು ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ ಸಭೆ ನಡೆಯಲಿದೆ.

12 ರಂದು ಬೆಳಿಗ್ಗೆ 11ರಿಂದ 1ರವರೆಗೆ ಚಿಂತಾಮಣಿ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ, ಅ. 22 ರಂದು ಬೆಳಿಗ್ಗೆ 11ರಿಂದ 1ರವರೆಗೆ ಚಿಕ್ಕಬಳ್ಳಾಪುರ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಸಭೆ ನಡೆಯಲಿದೆ.

ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿ, ಸಿಬ್ಬಂದಿ ಸಾರ್ವಜನಿಕರ ಕೆಲಸ ಕಾರ್ಯದಲ್ಲಿ ವಿಳಂಬ ಮಾಡಿದರೆ, ಲಂಚ ಕೇಳಿದರೆ, ಭ್ರಷ್ಟಾಚಾರ ನಡೆಸಿದರೆ ಈ ಬಗ್ಗೆ ಸಾರ್ವಜನಿಕರು ನಿರ್ದಿಷ್ಟ ಮಾಹಿತಿಯೊಂದಿಗೆ ಸಭೆಗೆ ಹಾಜರಾಗಿ ದೂರು ಅರ್ಜಿ ಮತ್ತು ಸಂಬಂಧಪಟ್ಟ ದಾಖಲೆಗಳನ್ನು ಸಲ್ಲಿಸಬಹುದು ಎಂದು ಚಿಕ್ಕಬಳ್ಳಾಪುರ ಭ್ರಷ್ಟಾಚಾರ ನಿಗ್ರಹ ದಳದ ಡಿವೈಎಸ್‌ಪಿ ಎಂ. ಪ್ರವೀಣ್ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು