ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಂತಾಮಣಿ | ಕಾರು ದ್ವಿಚಕ್ರವಾಹನಕ್ಕೆ ಡಿಕ್ಕಿ: ಶಿಕ್ಷಕನಿಗೆ ಗಂಭೀರ ಗಾಯ

Published 20 ಫೆಬ್ರುವರಿ 2024, 15:13 IST
Last Updated 20 ಫೆಬ್ರುವರಿ 2024, 15:13 IST
ಅಕ್ಷರ ಗಾತ್ರ

ಚಿಂತಾಮಣಿ: ಚಿಂತಾಮಣಿ-ಶಿಡ್ಲಘಟ್ಟ ರಸ್ತೆಯಲ್ಲಿರುವ ಕೋನಪ್ಪಲ್ಲಿ ಸಮೀಪ ಮಂಗಳವಾರ ದ್ವಿಚಕ್ರವಾಹನಕ್ಕೆ ಕಾರು ಡಿಕ್ಕಿಹೊಡೆದು ದ್ವಿಚಕ್ರವಾಹನ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಂಜಿಗುಂಟೆಯಲ್ಲಿ ಶಿಕ್ಷಕರಾಗಿರುವ ಶಿವಕುಮಾರ್ ಗಾಯಾಳು. ಅವರು ಕೆಲಸ ಮುಗಿಸಿಕೊಂಡು ನಗರದಲ್ಲಿರುವ ಮನೆಗೆ ವಾಪಸ್ ಬರುತ್ತಿದ್ದರು. ಕಾರು ನಗರದಿಂದ ಶಿಡ್ಲಘಟ್ಟ ಕಡೆಗೆ ಹೋಗುತ್ತಿತ್ತು. ಚಾಲಕನ ಅತಿವೇಗ ಮತ್ತು ಅಜಾಗರೂಕತೆ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಕಾರು ರಸ್ತೆ ಪಕ್ಕದ ಹಳ್ಳಕ್ಕೆ ನುಗ್ಗಿದೆ. ಸಾರ್ವಜನಿಕರು ಗಾಯಾಳುವನ್ನು ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕಳುಹಿಸಿಕೊಟ್ಟಿದ್ದಾರೆ. ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT