ಶನಿವಾರ, ಏಪ್ರಿಲ್ 1, 2023
23 °C

ಅಪಘಾತ; ಒಬ್ಬ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಮರಸನಹಳ್ಳಿ ಬಳಿ ಭಾನುವಾರ ಟ್ರ್ಯಾಕ್ಟರ್ ಮತ್ತು ಟೆಂಪೊ ನಡುವೆ ಅಪಘಾತ ಸಂಭವಿಸಿದೆ.

ತೆಲಂಗಾಣದ ನೂರ್ ಅಹಮ್ಮದ್ (60) ಎಂಬುವವರು ಮೃತಪಟ್ಟಿದ್ದಾರೆ.

ಟೆಂಪೊ ಬಾಗೇಪಲ್ಲಿ ಕಡೆಯಿಂದ ಬೆಂಗಳೂರಿಗೆ ಸಾಗುತ್ತಿತ್ತು. ಮರಸನಹಳ್ಳಿ ಬಳಿ ಟ್ರ್ಯಾಕ್ಟರ್‌ವೊಂದು ಟೊಮೆಟೊ ತುಂಬಿಕೊಂಡು ಸಾಗುತ್ತಿತ್ತು. ಈ ವೇಳೆ ಟೆಂಪೊ ಚಾಲಕ ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾನೆ. ಟೆಂಪೊ ಚಾಲಕ ನರೇಶ್‌ಗೆ ಗಾಯಗಳಾಗಿವೆ.

ಟೆಂಪೊ ಮಾಲೀಕರೂ ಆದ ನೂರ್ ಅಹಮ್ಮದ್, ಚಾಲಕನ ಪಕ್ಕ ಕುಳಿತಿದ್ದರು. ಅವರಿಗೆ ಹೊಟ್ಟೆ ಭಾಗಕ್ಕೆ ತೀವ್ರ ಪೆಟ್ಟು ಬಿದ್ದಿತ್ತು. ಅವರನ್ನು ಯಲಹಂಕದ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಅವರು ಚಿಕಿತ್ಸೆಗೆ ಸ್ಪಂದಿಸಲಿಲ್ಲ.

ಟ್ರ್ಯಾಕ್ಟರ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗ್ರಾಮಾಂತರ ಪೊಲೀಸ್ ಠಾಣೆ ಪಿಎಸ್‌ಐ ಬಿ.ಪಿ. ಮಂಜು ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಟ್ಯಾಕ್ಟರ್‌ನಲ್ಲಿದ್ದ ಟೊಮೆಟೊ ಕ್ರೇಟ್‌ಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿದ್ದವು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು