ಗುರುವಾರ , ಜನವರಿ 28, 2021
23 °C

ನೀತಿಸಂಹಿತೆ ಉಲ್ಲಂಘನೆ ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಂತಾಮಣಿ: ಗ್ರಾಮ ಪಂಚಾಯಿತಿ ಚುನಾವಣೆಯ ನೀತಿಸಂಹಿತೆ ಜಾರಿಯಾಗಿದ್ದರೂ ಕೃಷಿ ಇಲಾಖೆಯ ಅಧಿಕಾರಿಗಳು ಟರ್ಪಾಲಿನ್ ವಿತರಣೆ ಕಾರ್ಯಕ್ರಮ ನಡೆಸಿದ್ದಾರೆ ಎಂದು ತಾಲ್ಲೂಕು ಪಂಚಾಯಿತಿ ಸದಸ್ಯ ನಡಂಪಲ್ಲಿ ಶ್ರೀನಿವಾಸ್ ಆರೋಪಿಸಿದರು.

ತಾಲ್ಲೂಕು ಕೃಷಿ ಇಲಾಖೆಯಿಂದ ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಲಾಟರಿ ಮೂಲಕ ಟರ್ಪಾಲಿನ್ ಫಲಾನುಭವಿಗಳ ವಿತರಣಾ ಕಾರ್ಯಕ್ರಮದಲ್ಲಿನ ಅಧಿಕಾರಿಗಳ ಕಾರ್ಯವೈಖರಿಯನ್ನು ಖಂಡಿಸಿದರು.

ಚುನಾವಣಾ ಆಯೋಗ ನೀತಿಸಂಹಿತೆ ಜಾರಿಗೊಳಿಸಿದ್ದರೂ ಹೇಗೆ ಲಾಟರಿ ಪ್ರಕ್ರಿಯೆ ನಡೆಸುತ್ತಿದ್ದೀರಿ ಎಂದು ಪ್ರಶ್ನಿಸಿದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಜಿಲ್ಲಾ ಪಂಚಾಯಿತಿ ಸದಸ್ಯರು ಸೇರಿದಂತೆ ಜನಪ್ರತಿನಿಧಿಗಳನ್ನು ಆಹ್ವಾನಿಸದೆ ಲಾಟರಿ ಪ್ರಕ್ರಿಯೆಯನ್ನು ನಡೆಸುತ್ತಿರುವುದಕ್ಕೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ರೈತರಿಗೆ ಟರ್ಪಾಲಿನ್ ವಿತರಣೆ ಈಗಾಗಲೇ ವಿಳಂಬವಾಗಿದೆ. ನೀತಿಸಂಹಿತೆ ಕಾರಣದಿಂದ ಆಹ್ವಾನ ನೀಡಲು ಸಾಧ್ಯವಾಗಲಿಲ್ಲ ಎಂದು ಅಧಿಕಾರಿಗಳು ಸಮಜಾಯಿಷಿ ನೀಡಿದ ನಂತರ ಲಾಟರಿ ಪ್ರಕ್ರಿಯೆಯನ್ನು ಆರಂಭಿಸಲಾಯಿತು.

‘ಮಳೆಗಾಲದಲ್ಲಿ ರೈತರು ತಾಉಪ ತಹಶೀಲ್ದಾರ್ ಶೋಭಾ, ಸಹಾಯಕ ಕೃಷಿ ನಿರ್ದೇಶಕ ಡಾ.ಶ್ರೀನಿವಾಸ್, ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕಿ ಕವಿತಾ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ಧನಾರಾಯಣಸ್ವಾಮಿ, ರೇಷ್ಮೆ ಇಲಾಖೆಯ ಆಂಜನೇಯರೆಡ್ಡಿ, ತೋಟಗಾರಿಕೆ ಇಲಾಖೆಯ ರಾಜೇಶ್, ಬೈರಾರೆಡ್ಡಿ ಹಾಜರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.