ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ, ರಾಜ್ಯ ಸರ್ಕಾರಗಳ ಸಾಧನೆ ಶ್ರೀರಕ್ಷೆ: ಸದಾನಂದಗೌಡ

ಕಾಂಗ್ರೆಸ್‌ನ ಗ್ಯಾರಂಟಿ ಕಾರ್ಡ್ ವಿರುದ್ಧ ಸಂಸದ ಸದಾನಂದಗೌಡ ವಾಗ್ದಾಳಿ
Last Updated 11 ಮಾರ್ಚ್ 2023, 5:38 IST
ಅಕ್ಷರ ಗಾತ್ರ

ಚಿಂತಾಮಣಿ: ತಾಲ್ಲೂಕಿನ ಕಸಬಾ ಹೋಬಳಿಯ ಹೆಬ್ಬರಿ ಗ್ರಾಮದ ಬಳಿ ವೀರಭದ್ರಸ್ವಾಮಿ ಸೇವಾ ಟ್ರಸ್ಟ್‌ನಿಂದ ನಿರ್ಮಿಸಲಾಗಿರುವ ವೀರಭದ್ರ ಸ್ವಾಮಿಯ ಹೊಸ ದೇವಸ್ಥಾನವನ್ನು ಶುಕ್ರವಾರ ಉದ್ಘಾಟಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಸದ ಸದಾನಂದಗೌಡ ಮಾತನಾಡಿ, ‘ಕಾಂಗ್ರೆಸ್ ನಾಯಕರು ಅಧಿಕಾರಕ್ಕೆ ಬರುವ ಮೊದಲೇ ಜನರಿಗೆ ದಾರಿ ತಪ್ಪಿಸಲು ಸುಳ್ಳು ಭರವಸೆ ನೀಡುವ ಮೂಲಕ ಗ್ಯಾರಂಟಿ ಕಾರ್ಡ್ ವಿತರಿಸುತ್ತಿದ್ದಾರೆ. ಚುನಾವಣಾ ಫಲಿತಾಂಶ ಬಂದ ಮೇಲೆ ಜನರಿಗೆ ಕಾಂಗ್ರೆಸ್‌ನ ಮೋಸ ತಿಳಿಯುತ್ತದೆ’ ಎಂದು ಹೇಳಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 10 ಕೆ.ಜಿ ಅಕ್ಕಿ, 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುತ್ತೇವೆ ಎಂದು ಭರವಸೆ ನೀಡುತ್ತಿದೆ. ಅಧಿಕಾರಕ್ಕೆ ಬರುವುದಿಲ್ಲ ಎಂದು ಅವರಿಗೆ ಚೆನ್ನಾಗಿ ಗೊತ್ತು. ಅದರಿಂದಲೇ ಜಾರಿಗೆ ತರಲಾಗದ ಸುಳ್ಳು ಭರವಸೆಗಳನ್ನು ಕಾಂಗ್ರೆಸ್ ನೀಡುತ್ತಿದೆ. ಕಾಂಗ್ರೆಸ್ ಪಕ್ಷದ ಬಗ್ಗೆ ಜನರಿಗೆ ಅನುಮಾನವಿದೆ. ಹೀಗಾಗಿ ಕಾಂಗ್ರೆಸ್ ಪಕ್ಷವು ಗ್ಯಾರಂಟಿ ಕಾರ್ಡ್ ವಿತರಿಸುತ್ತಿದೆ ಎಂದು ವ್ಯಂಗ್ಯವಾಡಿದರು.

ಜೆಡಿಎಸ್ ನಾಯಕರು ದೇವೇಗೌಡರ ಸಾಧನೆಗಳನ್ನು ಹೇಳಲಿ, ಕಾಂಗ್ರೆಸ್ ನಾಯಕರು ಸಿದ್ದರಾಮಯ್ಯ ಮತ್ತು ಇಂದಿರಾಗಾಂಧಿ ಸಾಧನೆಗಳು ಏನು ಎಂಬುದನ್ನು ತಿಳಿಸಲಿ. ನಾವು ಪ್ರಧಾನಿ ಮೋದಿ ಸಾಧನೆ ತಿಳಿಸುತ್ತೇವೆ. ಆಗ ಜನರೇ ತೀರ್ಮಾನಿಸುತ್ತಾರೆ.

ಸರ್ಕಾರದ ಮುಖ್ಯ ಸಚೇತಕ ವೈ.ಎ. ನಾರಾಯಣಸ್ವಾಮಿ, ವಿಧಾನ ಪರಿಷತ್ ಸದಸ್ಯ ಚಿದಾನಂದಗೌಡ ಹಾಗೂ ಸ್ಥಳೀಯ ಮುಖಂಡರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT