ಶಿಡ್ಲಘಟ್ಟ: ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಕ್ರೀಡೆ ಮತ್ತು ಕ್ರೀಡಾಪಟುಗಳ ಅನುಕೂಲಕ್ಕಾಗಿ ಅಗತ್ಯ ಸೌಲಭ್ಯ ಒದಗಿಸಲು ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ಶಾಸಕ ವಿ. ಮುನಿಯಪ್ಪ ಭರವಸೆ ನೀಡಿದರು.

ನಗರದ ನೆಹರೂ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಸ್ವಚ್ಛ ಭಾರತ್ ಅಭಿಯಾನದಡಿ ಕ್ರೀಡಾಂಗಣದಲ್ಲಿ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕ್ಷೇತ್ರದಲ್ಲಿರುವ ಕ್ರೀಡಾಪಟುಗಳಿಗೆ ತಮ್ಮ ಅಧಿಕಾರದ ಅವಧಿಯಲ್ಲಿ ನೆಹರೂ ಕ್ರೀಡಾಂಗಣವನ್ನು ಅಭಿವೃದ್ಧಿಗೊಳಿಸಲಾಗಿತ್ತು. ಮುಂದಿನ ದಿನಗಳಲ್ಲಿ ಕ್ರೀಡಾಂಗಣದಲ್ಲಿ ಮೂಲಸೌಲಭ್ಯ ಕಲ್ಪಿಸಿ ಪ್ರೇಕ್ಷಕರು ಮತ್ತು ಕ್ರೀಡಾಪಟುಗಳಿಗಾಗಿ ಶಾಸಕರ ಕ್ಷೇತ್ರಾಭಿವೃದ್ಧಿ ನಿಧಿಯಿಂದ ಪೆವಿಲಿಯನ್ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕ್ರೀಡಾಂಗಣದಲ್ಲಿ ಅಭಿವೃದ್ಧಿ ಹೆಸರಿನಲ್ಲಿ ಅವ್ಯವಹಾರ ನಡೆದಿದೆ ಎಂಬ ದೂರು ಕೇಳಿ ಬಂದಿದೆ. ಈ ಸಂಬಂಧ ಕ್ರೀಡಾ ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಕ್ರೀಡಾಪಟುಗಳಿಗೆ ಜಿಲ್ಲಾ, ರಾಜ್ಯ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ತಮ್ಮಲ್ಲಿರುವ ಪ್ರತಿಭೆ ಪ್ರದರ್ಶಿಸಲು ಕ್ರೀಡಾಂಗಣಕ್ಕೆ ಅಗತ್ಯ ಎಲ್ಲಾ ರೀತಿಯ ಸೌಲಭ್ಯ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದುಎಂದರು.

‘ಸಮಾಜದಲ್ಲಿರುವ ಪ್ರತಿಯೊಬ್ಬರು ಆರೋಗ್ಯವಾಗಿರಲು ಕ್ರೀಡೆ ಮತ್ತು ವ್ಯಾಯಾಮ ಅತ್ಯಗತ್ಯ. ನಗರದ ಕ್ರೀಡಾಂಗಣದಲ್ಲಿ ವಾಯುವಿಹಾರಕ್ಕೆ ಬರುವ ನಾಗರಿಕರಿಗೆ ಕುಡಿಯುವ ನೀರು, ಶೌಚಾಲಯ ಸಹಿತ ಕ್ರೀಡಾಂಗಣದ ಸುತ್ತಮುತ್ತ ಕಾಂಪೌಂಡ್ ವ್ಯವಸ್ಥೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುತ್ತೇನೆ’ ಎಂದು ತಿಳಿಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರ ಸ್ವಚ್ಛ ಭಾರತ್ ಅಭಿಯಾನದಡಿ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿವೆ. ಸ್ವಚ್ಛತಾ ಕಾರ್ಯ ಒಂದು ದಿನಕ್ಕೆ ಸೀಮಿತಗೊಳಿಸದೆ ಪ್ರತಿನಿತ್ಯ ಮನೆಯ ಅಂಗಳದಿಂದ ನಗರದ ಬೀದಿಬೀದಿಗಳು ಕೂಡ ಸ್ವಚ್ಛವಾಗಿಡಲು ನಾಗರಿಕರು ಸಹಕರಿಸಬೇಕೆಂದುಕೋರಿದರು.

ನಗರಸಭೆ ಪೌರಾಯುಕ್ತ ಶ್ರೀಕಾಂತ್, ಸದಸ್ಯ ಮಂಜುನಾಥ್, ನೆಹರೂ ಕ್ರೀಡಾಂಗಣ ಅಭಿವೃದ್ಧಿ ಸಮಿತಿ ಅಧ್ಯಕ್ಷ ನಿರಂಜನ್, ಉಪಾಧ್ಯಕ್ಷ ಟಿ.ಟಿ. ನರಸಿಂಹಪ್ಪ, ಕಾರ್ಯದರ್ಶಿ ಜೆ.ವಿ. ಸುರೇಶ್, ಮನೋಹರ್, ಕ್ರೀಡಾಪಟು ಮೊಹಮ್ಮದ್ ಹಫೀಜ್, ಬಾಬಾಜಾನ್, ಮಹಬೂಬ್ಪಾಷ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಶ್ರೀನಾಥ್, ಮಧು, ನಗರಸಭೆಯ ಮುರಳಿ, ಜಯ, ಕ್ರೀಡಾಂಗಣದ ಶ್ರೀನಿವಾಸ್, ರೂರಲ್ ಸ್ಕೇಟಿಂಟ್ ಅಕಾಡೆಮಿ ಕಾರ್ಯದರ್ಶಿ ಶಿವಪ್ಪ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.