ಸೋಮವಾರ, ಏಪ್ರಿಲ್ 12, 2021
25 °C

ಶಿಕ್ಷಕರ ಸಮಸ್ಯೆ ಶೀಘ್ರ ಪರಿಹರಿಸಲು ಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಂತಾಮಣಿ: ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಹಂತದಲ್ಲಿ ನಿವಾರಣೆಯಾಗುವ ಶಿಕ್ಷಕರ ಸಮಸ್ಯೆಗಳನ್ನು ಹಂತ ಹಂತವಾಗಿ ಪರಿಹರಿಸಲಾಗುವುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಶ್ ಹೇಳಿದರು.

ನಗರದ ಸರ್ಕಾರಿ ನೌಕರರ ಭವನದಲ್ಲಿ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪದಾಧಿಕಾರಿಗಳಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು.

ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಆರ್. ನಾರಾಯಣಸ್ವಾಮಿ ಮಾತನಾಡಿ, ಶಿಕ್ಷಕರು ಸಮಸ್ಯೆ ಹೊತ್ತು ಕಚೇರಿಗೆ ಬಂದಾಗ ಗೌರವದಿಂದ ಕಾಣಬೇಕು. ನಿಗದಿತ ಕಾಲಾವಧಿಯಲ್ಲಿ ಕೆಲಸ ಮಾಡಿಕೊಡಬೇಕು. ಅನಗತ್ಯವಾಗಿ ಅಲೆದಾಡಿಸಬಾರದು ಎಂದು ಮನವಿ ಮಾಡಿದರು.

ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಜನಾರ್ದನ ರೆಡ್ಡಿ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಎನ್. ವೆಂಕಟಾಚಲಪತಿ, ತಾಲ್ಲೂಕು ಘಟಕದ ಅಧ್ಯಕ್ಷ ಶಿವಾರೆಡ್ಡಿ, ಪದಾಧಿಕಾರಿ ಜಿ.ವಿ. ಬಾಬುರೆಡ್ಡಿ, ಜಿ. ರಾಮರೆಡ್ಡಿ, ಪಿ.ಎ. ಮಂಜುನಾಥ್, ಜಯಮ್ಮ, ಎಂ. ವೆಂಕಟೇಶಪ್ಪ, ಡಿ.ವಿ. ಕೃಷ್ಣಾರೆಡ್ಡಿ, ಡಿ.ಎನ್. ಚೌಡರೆಡ್ಡಿ, ಸೀನಪ್ಪ, ವಿಜಯಲಕ್ಷ್ಮಮ್ಮ, ಪಿ.ವಿ. ನಾರಾಯಣಸ್ವಾಮಿ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು