ಮಂಗಳವಾರ, ಆಗಸ್ಟ್ 20, 2019
27 °C

ಸರ್ಟಿಫಿಕೇಟ್ ಕೋರ್ಸ್‌ಗಳಿಗೆ ದಾಖಲಾತಿ ಆರಂಭ

Published:
Updated:

ಚಿಕ್ಕಬಳ್ಳಾಪುರ: ‘ಜಚನಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲದ ಸ್ನಾತಕೋತ್ತರ, ಪದವಿ, ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಕೋರ್ಸ್‌ಗಳಿಗೆ ದಾಖಲಾತಿ ಪ್ರಕ್ರಿಯೆ ಪ್ರಾರಂಭವಾಗಿದೆ’ ಎಂದು ಇಂದಿರಾಗಾಂಧಿ ಮುಕ್ತ ವಿಶ್ವವಿದ್ಯಾಲಯದ ಪ್ರಾದೇಶಿಕ ನಿರ್ದೇಶಕ ಜಿ.ಎಚ್‌.ಇಮ್ರಾಪುರ್ ತಿಳಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗ್ರಾಮೀಣ ಭಾಗದದಲ್ಲಿ ನಾನಾ ಕಾರಣಗಳಿಂದ ಪದವಿಯಿಂದ ವಂಚಿತರಾದ ಯುವಕ, ಯುವತಿಯರು ಇದು ಒಂದು ಸುವರ್ಣಾವಕಾಶ. 18 ವರ್ಷ ದಾಟಿದವರು ಈ ಕೋರ್ಸ್‌ಗಳಿಗೆ ದಾಖಲಾಗಬಹುದು. ಶನಿವಾರ ಮತ್ತು ಭಾನುವಾರ ವಿಶೇಷ ತರಗತಿಗಳು ನಡೆಯುತ್ತವೆ’ ಎಂದು ಹೇಳಿದರು.

‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಅಂಗವಿಕಲ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ದೊರೆಯುತ್ತದೆ. ವಿವಿಧ ಕೋರ್ಸ್‌ಗಳ ಪ್ರವೇಶಕ್ಕೆ ಪಡೆಯಲು www.onlineadmission.ignou.ac.in ಜಾಲತಾಣದ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ 9901221050 ಸಂಖ್ಯೆಗೆ ಸಂಪರ್ಕಿಸಬಹುದು’ ಎಂದರು.

ಇಂದಿರಾ ಗಾಂಧಿ ಮುಕ್ತ ವಿಶ್ವವಿದ್ಯಾಲಯದ ಅಧ್ಯಯನ ಕೇಂದ್ರದ ಸಂಯೋಜಕ ಕೆ.ಪಿ ನಾಗೇಶ್, ಜಚನಿ ವಿದ್ಯಾಸಂಸ್ಥೆಗಳ ಆಡಳಿತಾಧಿಕಾರಿ ಶಿವಜ್ಯೋತಿ, ಇಂದಿರಾ ಗಾಂಧಿ ಮುಕ್ತ ವಿಶ್ವವಿದ್ಯಾಲಯದ ಉಪನಿರ್ದೇಶಕಿ ಎಸ್.ರಾಧಾ ಉಪಸ್ಥಿತರಿದ್ದರು.

Post Comments (+)