ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ಸೌಲಭ್ಯ ಸದ್ಬಳಕೆಗೆ ಸಲಹೆ

Last Updated 22 ಏಪ್ರಿಲ್ 2022, 3:21 IST
ಅಕ್ಷರ ಗಾತ್ರ

ಗುಡಿಬಂಡೆ: ರಾಜ್ಯದಲ್ಲಿ ಸಕಾಲ ಯೋಜನೆ ಪ್ರಾರಂಭಗೊಂಡು ಹತ್ತುವರ್ಷ ಪೂರೈಸಿದ ಹಿನ್ನೆಲೆಯಲ್ಲಿ ತಾಲ್ಲೂಕು ಆಡಳಿತ ಸೇರಿದಂತೆ ವಿವಿಧ ಇಲಾಖೆಗಳು ದಶಮಾನೋತ್ಸವ ಕಾರ್ಯಕ್ರಮ ಆಚರಿಸುವುದರ ಜೊತೆಗೆ ಪಟ್ಟಣದ ಮುಖ್ಯರಸ್ತೆಯಲ್ಲಿ ಜಾಥಾ ನಡೆಸಿದರು.

ಗ್ರೇಡ್-2 ತಹಶೀಲ್ದಾರ್ ಮಹೇಶ್ ಮಾತನಾಡಿ, ಸರ್ಕಾರದ ಪ್ರತಿಷ್ಠಿತ ಸಕಾಲ ಯೋಜನೆಯು ಪ್ರಾರಂಭವಾಗಿ ದಶಕ ಪೂರೈಸಿದೆ. ಸರ್ಕಾರದ ಇಲಾಖೆಗಳು ಸಾರ್ವಜನಿಕರಿಗೆ ನೀಡಬೇಕಾದ ಸೇವೆಗಳನ್ನು ಶೀಘ್ರವಾಗಿ ತಲುಪಿಸಲು ಈ ಯೋಜನೆಯು ಸಹಕಾರಿಯಾಗಿದೆ ಎಂದರು.

ಯೋಜನೆಯಡಿ ರಾಜ್ಯದಲ್ಲಿ ಗುಡಿಬಂಡೆ 17ನೇ ಸ್ಥಾನದಲ್ಲಿದ್ದು, ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದಿದೆ. ಕೆಲವೇ ದಿನಗಳಲ್ಲಿ ಜನರಿಗೆ ಅಗತ್ಯ ಸೇವೆ ತಲುಪಿಸಲಾಗುತ್ತಿದೆ. ಜನರು ಈ ಸೌಲಭ್ಯಗಳನ್ನು ಉಪಯೋಗಿಸಿಕೊಳ್ಳಬೇಕು ತಿಳಿಸಿದರು.

ಪೊಲೀಸ್ ಸಬ್‌ ಇನ್‌ಸ್ಪೆಕ್ಟರ್ ಪ್ರತಾಪ್ ಮಾತನಾಡಿದರು. ತಾ.ಪಂ. ಇ.ಒ. ರವೀಂದ್ರ, ಪ.ಪಂ. ಮುಖ್ಯಾಧಿ ಕಾರಿ ರಾಜಶೇಖರ್, ಬಿಸಿಎಂ ಇಲಾಖೆಯ ರಾಮಯ್ಯ, ಆರೋಗ್ಯ ಇಲಾಖೆಯ ವೈದ್ಯಾಧಿಕಾರಿ ಡಾ.ವಿಜಯಲಕ್ಷ್ಮಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಶ್ರೀರಾಮಪ್ಪ, ಕೃಷ್ಣಪ್ಪ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT