ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರೋಗ್ಯ ಶಿಬಿರ ಸದ್ಬಳಕೆಗೆ ಸಲಹೆ

ಕೈವಾರ ತಾತಯ್ಯ ಜಯಂತಿ ಆಚರಣೆ
Last Updated 30 ಮಾರ್ಚ್ 2022, 2:24 IST
ಅಕ್ಷರ ಗಾತ್ರ

ಚಿಂತಾಮಣಿ: ‘ಗ್ರಾಮೀಣ ಪ್ರದೇಶದಲ್ಲಿ ಸರ್ಕಾರ ಹಾಗೂ ಸಂಘ, ಸಂಸ್ಥೆಗಳು ಹಮ್ಮಿಕೊಳ್ಳುವ ಉಚಿತ ಆರೋಗ್ಯ ತಪಾಸಣಾ ಶಿಬಿರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ತಪಾಸಣೆ ಮಾಡಿಸಿಕೊಂಡು ಆರೋಗ್ಯವನ್ನು ಕಾಪಾಡಿಕೊಳ್ಳಬೇಕು’ ಎಂದು ಶಾಸಕ ಎಂ. ಕೃಷ್ಣಾರೆಡ್ಡಿ ಸಲಹೆ ನೀಡಿದರು.

ತಾಲ್ಲೂಕಿನ ಕಾಗತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೃಷ್ಣರಾಜಪುರ ಗ್ರಾಮದ ಭಾರತ ರತ್ನ ಪ್ರೌಢಶಾಲೆಯಲ್ಲಿ ಸದ್ಗುರು ತಾತಯ್ಯನವರ ಜಯಂತಿ ಅಂಗವಾಗಿ ಕಣ್ವ ಶ್ರೀಸಾಯಿ ಆಸ್ಪತ್ರೆ, ಕ್ಷಯರೋಗ ನಿವಾರಣಾ ಘಟಕ, ಸಾರ್ವಜನಿಕ ಆಸ್ಪತ್ರೆ ಹಾಗೂ ಲಯನ್ಸ್ ಕ್ಲಬ್ ಆಫ್‌ ಚಿಂತಾಮಣಿಯಿಂದ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಅಂಗನವಾಡಿ ಕೇಂದ್ರದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಗ್ರಾಮೀಣ ಭಾಗದ ಬಡವರಿಗೆ ಆರೋಗ್ಯ ತಪಾಸಣೆ, ಚಿಕಿತ್ಸೆ ದುಬಾರಿಯಾಗಿದೆ. ಅನೇಕರು ಆರ್ಥಿಕ ತೊಂದರೆಯಿಂದ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳದೆ ತೊಂದರೆ ಅನುಭವಿಸುತ್ತಾರೆ. ಇಂತಹ ಜನತೆಗೆ ಉಚಿತ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಹಾಗೂ ಸಂಸ್ಥೆಗಳು ಗ್ರಾಮೀಣ ಪ್ರದೇಶದಲ್ಲಿ ಶಿಬಿರ ಹಮ್ಮಿಕೊಂಡು ಬರುತ್ತಿರುವುದು ಶ್ಲಾಘನೀಯ ಎಂದು
ಹೇಳಿದರು.

ಶಿಬಿರದಲ್ಲಿ ಕಾಗತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಜನತೆ ಪಾಲ್ಗೊಂಡು ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಕಾಗತಿ ಗ್ರಾ.ಪಂ. ಅಧ್ಯಕ್ಷ ಎಸ್. ನಾಗರಾಜ್, ಉಪಾಧ್ಯಕ್ಷೆ ಶಾಜೀಯಾಬಾನು, ಮುಖಂಡ ವೆಂಕಟರೆಡ್ಡಿ, ಬಿ.ಜಿ. ನಾರಾಯಣಸ್ವಾಮಿ, ದಿಲೀಪ್, ಸಿಡಿಪಿಒ ಮಹೇಂದ್ರ, ಪಿಡಿಒ ಜಿ.ಎನ್. ಲೋಕೇಶ್ ಸೇರಿದಂತೆ ಗ್ರಾಮ ಪಂಚಾಯಿತಿ ಸದಸ್ಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT