ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂವಿಧಾನ ಗೌರವಿಸಲು ನಾಗರಿಕರಿಗೆ ನ್ಯಾಯಾಧೀಶ ಎಚ್.ಎಸ್. ಮಂಜುನಾಥ್ ಸಲಹೆ

Last Updated 29 ನವೆಂಬರ್ 2020, 2:00 IST
ಅಕ್ಷರ ಗಾತ್ರ

ಚಿಂತಾಮಣಿ: ‘ಕಾನೂನು ಕಾಪಾಡಿಕೊಂಡು ಆಡಳಿತ ನಡೆಸಲು ಪ್ರತಿಯೊಂದು ದೇಶಕ್ಕೂ ಸಂವಿಧಾನ ಅಗತ್ಯ’ ಎಂದು 2ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್‌ ನ್ಯಾಯಾಧೀಶ ಎಚ್.ಎಸ್. ಮಂಜುನಾಥ್ ತಿಳಿಸಿದರು.

ತಾಲ್ಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘದ ಆಶ್ರಯದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಸಂವಿಧಾನ ದಿನಾಚರಣೆಯಲ್ಲಿ ಮಾತನಾಡಿದರು.

ವಿಶ್ವದಲ್ಲೇ ಅತ್ಯಂತ ದೊಡ್ಡ ಸಂವಿಧಾನ ಹೊಂದಿರುವ ಭಾರತದ ಬಗ್ಗೆ ಹೆಮ್ಮೆ ಪಡಬೇಕು. ಸಮಾಜದ ಕಟ್ಟಕಡೆಯ ವ್ಯಕ್ತಿಯಿಂದ ದೇಶದ ಪ್ರಥಮ ಪ್ರಜೆವರೆಗೂ ಸಮಾನವಾದ ಕಾನೂನು ಚೌಕಟ್ಟು ರೂಪಿಸಲಾಗಿದೆ ಎಂದರು.

ವಕೀಲರ ಸಂಘದ ಅಧ್ಯಕ್ಷ ಎಸ್. ರಾಜಾರಾಂ ಸಂವಿಧಾನ ದಿನಾಚರಣೆ ಕುರಿತು ಹಾಗೂ ವಕೀಲ ಜಿ.ಎಂ. ಇಬ್ರಾಹಿಂ ಮೂಲಭೂತ ತತ್ವಗಳ ಕುರಿತು ಉಪನ್ಯಾಸ ನೀಡಿದರು. ಹಿರಿಯ ಸಿವಿಲ್ ನ್ಯಾಯಾಧೀಶ ಎಂ. ರಾಜೇಂದ್ರ ಕುಮಾರ್ ಅಧ್ಯಕ್ಷತೆವಹಿಸಿದ್ದರು. ಪ್ರಧಾನ ಸಿವಿಲ್ ನ್ಯಾಯಾಧೀಶ ಜಿ.ಜೆ. ಶಿವಕುಮಾರ್, ವಕೀಲರು ಹಾಗೂ ಅಧಿಕಾರಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT