ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುವಜನರು ಕ್ರೀಡಾಸಕ್ತಿ ಬೆಳೆಸಿಕೊಳ್ಳಲು ಸಲಹೆ

Last Updated 24 ನವೆಂಬರ್ 2020, 3:32 IST
ಅಕ್ಷರ ಗಾತ್ರ

ಗೌರಿಬಿದನೂರು: ತಾಲ್ಲೂಕಿನ ಯುವ ಕ್ರೀಡಾಸಕ್ತರನ್ನು ಪ್ರೋತ್ಸಾಹಿಸಿ ಸೂಕ್ತ ತರಬೇತಿ ಹಾಗೂ ಮಾರ್ಗದರ್ಶನ ನೀಡುವ ಮೂಲಕ ಅವರಲ್ಲಿ ಕ್ರೀಡಾ ಮನೋಭಾವ ಬೆಳೆಸಬೇಕಾಗಿದೆ ಎಂದು ಜಿ.ಪಂ. ಸದಸ್ಯ ಕೆ. ಕೆಂಪರಾಜು ತಿಳಿಸಿದರು.

ನಗರದಲ್ಲಿ ಡಿಸೆಂಬರ್‌ನಲ್ಲಿ ನಡೆಯಲಿರುವ ಪ್ರೀಮಿಯರ್ ಲೀಗ್ 20:20 ಕ್ರಿಕೆಟ್ ಪಂದ್ಯಾವಳಿಯ ಪಕ್ಷಿನೋಟವನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.

ಪಂದ್ಯಾವಳಿಯಲ್ಲಿ ವಿಜೇತ ರಾದವರಿಗೆ ಪ್ರಥಮ ಬಹುಮಾನ ₹ 100001, ದ್ವಿತೀಯ ಬಹುಮಾನ ₹ 50001 ಹಾಗೂ ತೃತೀಯ ಬಹುಮಾನ ₹ 25001 ನಗದು ನೀಡಲಾಗುವುದು. ಇದಲ್ಲದೆ ಪಂದ್ಯ ಶ್ರೇಷ್ಠ ಹಾಗೂ ಸರಣಿ ಶ್ರೇಷ್ಠ ಪ್ರಶಸ್ತಿಗಾಗಿ ವಿಶೇಷ ಆಕರ್ಷಕ ಬಹುಮಾನಗಳನ್ನು ಇಡಲಾಗಿದೆ. ಯುವಕರು ಉತ್ಸಾಹಿಗಳಾಗಿ ಭಾಗವಹಿಸಿ ಕ್ರೀಡಾ ಪ್ರತಿಭೆ ಪ್ರದರ್ಶಿಸಬೇಕು ಎಂದು ಹೇಳಿದರು.

ಮುಖಂಡರಾದ ವೇದಲವೇಣಿ ರಾಮು, ಮೋಹನ್, ಪ್ರದೀಪ್, ಜಗದೀಶ್, ಸುಹಾಸ್, ಆಕಾಶ್‌ರಾಜ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT