ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಂಬಾಕು ವಿರುದ್ಧ ವಿದ್ಯಾರ್ಥಿಗಳಿಗೆ ಜಾಗೃತಿ

Last Updated 26 ನವೆಂಬರ್ 2021, 2:09 IST
ಅಕ್ಷರ ಗಾತ್ರ

ಚಿಂತಾಮಣಿ: ‘ತಂಬಾಕು ಸೇವನೆಯಿಂದ ಕ್ಯಾನ್ಸರ್ ಮತ್ತಿತರ ಮಾರಕ ಕಾಯಿಲೆಗಳು ಎದುರಾಗುತ್ತವೆ. ಸಾರ್ವಜನಿಕ ಸ್ಥಳಗಳಲ್ಲಿ ಬೀಡಿ, ಸಿಗರೇಟ್ ಸೇವನೆ ಮಾಡುವುದರಿಂದ ಆರೋಗ್ಯ ಕೆಡುವುದಲ್ಲದೆ ಸುತ್ತಮುತ್ತಲಿನ ಇತರರ ಆರೋಗ್ಯವೂ ಹದಗೆಡುತ್ತದೆ’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸ್ವಾತಿ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲ್ಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಕಾನೂನು ಸೇವಾ ಸಮಿತಿಯಿಂದ ಗುರುವಾರ ನಗರದಲ್ಲಿ ಹಮ್ಮಿಕೊಂಡಿದ್ದ ಗುಲಾಬಿ ಆಂದೋಲನ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ದೇಶದಾದ್ಯಂತ ಸಾವಿರಾರು ಜನರು ತಂಬಾಕು ಸೇವನೆ ಮಾಡಿ ಜೀವ ಕಳೆದುಕೊಳ್ಳುತ್ತಿದ್ದಾರೆ. ಧೂಮಪಾನ ಮಾಡಿ ಬಿಟ್ಟ ಹೊಗೆಯನ್ನು ಇನ್ನೊಬ್ಬರು ಸೇವಿಸುತ್ತಾರೆ. ಅವರ ಆರೋಗ್ಯವೂ ಕೆಡುತ್ತದೆ ಎಂದು
ಹೇಳಿದರು.

ಸರ್ಕಾರ ಸಾರ್ವಜನಿಕ ಪ್ರದೇಶ, ಶಾಲಾ, ಕಾಲೇಜುಗಳ ಬಳಿ ತಂಬಾಕು ಮಾರಾಟ ಹಾಗೂ ಸೇವನೆಯನ್ನು ನಿಷೇಧಿಸಿದೆ. ಧೂಮಪಾನ ಮಾಡಿ ಬಿಟ್ಟ ಹೊಗೆಯನ್ನು ಸೇವನೆ ಮಾಡಿ ಮಹಿಳೆಯರಿಗೂ, ಮಕ್ಕಳಿಗೂ ಅಪಾಯ ಆಗುತ್ತಿದೆ ಎಂದ ಅವರು, ತಂಬಾಕು, ಧೂಮಪಾನ ಮತ್ತಿತರ ದುಶ್ಚಟಗಳಿಂದ ದೂರವಿರುವಂತೆ ಗುಲಾಬಿ ನೀಡಿ ಅರಿವು ಮೂಡಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶಪ್ಪ ಮಾತನಾಡಿದರು. ಪ್ರಧಾನ ಸಿವಿಲ್ ನ್ಯಾಯಾಧೀಶ ಜಿ.ಜೆ. ಶಿವಕುಮಾರ್, ತಹಶೀಲ್ದಾರ್ ಹನುಮಂತರಾಯಪ್ಪ, ಸಿಡಿಪಿಒ ಮಹೇಂದ್ರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಮ್ಮದ್ ಉಸ್ಮಾನ್, ಶಿಕ್ಷಣ ಇಲಾಖೆಯ ಇಸಿಒ ಮುರಳೀಕೃಷ್ಣ, ವೆಂಕಟೇಶ ಮತ್ತು ನಾಗರಾಜ್, ಮಕ್ಕಳ ರಕ್ಷಣಾಧಿಕಾರಿ ಮಂಜುನಾಥ್, ಹಿರಿಯ ಆರೋಗ್ಯ ನಿರೀಕ್ಷಕ ಶ್ರೀನಿವಾಸರೆಡ್ಡಿ, ಮುಖ್ಯೋಪಾಧ್ಯಾಯ ನಾಗರಾಜ್, ಶಿಕ್ಷಕರಾದ ಉಪೇಂದ್ರ, ಶೋಭಾ, ರಾಧಮ್ಮ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT