ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿ ಕೂಲಿ ಕಾರ್ಮಿಕರ ಪ್ರತಿಭಟನೆ

Last Updated 27 ನವೆಂಬರ್ 2020, 9:22 IST
ಅಕ್ಷರ ಗಾತ್ರ

ಬಾಗೇಪಲ್ಲಿ: ಕೇಂದ್ರ ಸರ್ಕಾರದ ಕಾರ್ಮಿಕ, ರೈತ ವಿರೋಧಿ ನೀತಿ ವಿರುದ್ಧ ಕೇಂದ್ರ ಕಾರ್ಮಿಕ ಸಂಘಟನೆಗಳು ಅಖಿಲ ಭಾರತ ಮುಷ್ಕರಕ್ಕೆ ಕರೆ ನೀಡಿದ್ದರಿಂದ ತಾಲ್ಲೂಕು ಕೃಷಿ ಕಾರ್ಮಿಕ ಸಂಘಟನೆಗಳ ಮುಖಂಡರು ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಎಂ. ನಾಗರಾಜು ಅವರಿಗೆ ಮನವಿ ಪತ್ರ ಸಲ್ಲಿಸಿದರು. ಬಳಿಕ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯದರ್ಶಿ ಪಿ. ಮಂಜುನಾಥ ರೆಡ್ಡಿ ಮಾತನಾಡಿ, ಕೃಷಿ ಭೂಮಿಯನ್ನು ರಿಯಲ್ ಎಸ್ಟೇಟ್‌ ಉದ್ಯಮಿಗಳು ಹಾಗೂ ಬಹುರಾಷ್ಟ್ರೀಯ ಕಂಪನಿಗಳಿಗೆ ಮಾರಾಟ ಮಾಡುವ ಸಂಬಂಧ ಭೂಸುಧಾರಣಾ ಕಾಯ್ದೆಯ ತಿದ್ದುಪಡಿಗೆ ಕೇಂದ್ರ ಸರ್ಕಾರ ಮುಂದಾಗಿದೆ. ಇದರಿಂದ ರೈತರು ಭೂಮಿ ಕಳೆದುಕೊಂಡು ಬೀದಿಪಾಲಾಗುತ್ತಾರೆ ಎಂದು ದೂರಿದರು.

ಸಿಐಟಿಯು ತಾಲ್ಲೂಕು ಅಧ್ಯಕ್ಷ ಬಿ. ಆಂಜನೇಯ ರೆಡ್ಡಿ ಮಾತನಾಡಿ, ನರೇಗಾ ಯೋಜನೆಯನ್ನು ನಗರ ಪ್ರದೇಶಗಳಿಗೆ ವಿಸ್ತರಿಸಬೇಕು. ಎಲ್ಲಾ ಕಾರ್ಮಿಕರಿಗೆ ಪಿಂಚಣಿ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ತಾಲ್ಲೂಕು ಪಂಚಾಯಿತಿ ಸದಸ್ಯ ಶ್ರೀರಾಮನಾಯಕ್, ಸಿಪಿಐ(ಎಂ) ತಾಲ್ಲೂಕು ಕಾರ್ಯದರ್ಶಿ ಮಹಮದ್ ಅಕ್ರಂ, ಸಿಐಟಿಯು ತಾಲ್ಲೂಕು ಕಾರ್ಯದರ್ಶಿ ಜಿ. ಮುಸ್ತಾಫ, ಕರ್ನಾಟಕ ಪ್ರಾಂತ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಎ.ಎನ್. ಶ್ರೀರಾಮಪ್ಪ, ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಸಂಚಾಲಕ ಲಕ್ಷ್ಮಣರೆಡ್ಡಿ, ರಾಜ್ಯ ಮಹಿಳಾ ಸಂಚಾಲಕಿ ಸಿ. ಉಮಾ, ತಾಲ್ಲೂಕು ಅಧ್ಯಕ್ಷೆ ಟಿ.ಆರ್. ಪ್ರಮೀಳಾ, ಮುಖಂಡರಾದ ಮುನಿಯಪ್ಪ, ಪಾರ್ವತಮ್ಮ, ನಾಗಮ್ಮ, ಅನಿತಮ್ಮ, ಭಾನು ಸೇರಿದಂತೆ ಅಕ್ಷರದಾಸೋಹ, ಬಿಸಿಯೂಟ, ಗ್ರಾಮ ಪಂಚಾಯಿತಿ ನೌಕರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT