ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುದುವಾಡಿ ಹೊಸಹಳ್ಳಿಯಲ್ಲಿ ಕೃಷಿ ಮಾಹಿತಿ ಕೇಂದ್ರ ಉದ್ಘಾಟನೆ

ಕೃಷಿ ಮಾಹಿತಿ
Published 28 ನವೆಂಬರ್ 2023, 15:46 IST
Last Updated 28 ನವೆಂಬರ್ 2023, 15:46 IST
ಅಕ್ಷರ ಗಾತ್ರ

ಚಿಂತಾಮಣಿ: ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದಡಿ ರೇಷ್ಮೆ ಕೃಷಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಮಂಗಳವಾರ ಮುದುವಾಡಿ ಹೊಸಹಳ್ಳಿಯಲ್ಲಿ ‘ಕೃಷಿ ಮಾಹಿತಿ ಕೇಂದ್ರದ ಉದ್ಘಾಟನಾ ಸಮಾರಂಭ’ ಮತ್ತು ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದರು.

ರೇಷ್ಮೆ ಕೃಷಿ ವಿಭಾಗದ ಮುಖ್ಯಸ್ಥ ರಾಮಕೃಷ್ಣನಾಯ್ಕ ಮಾತನಾಡಿ. ಕೃಷಿಗೆ ಸಂಬಂಧಿಸಿದ ಮಾಹಿತಿಯನ್ನು ಸದುಪಯೋಗಪಡಿಸಿಕೊಳ್ಳಬೇಕು. ಪರಿಸರದಲ್ಲಿ ಗಿಡ–ಮರ ನೆಡುವುದರಿಂದ ಅಗುವ ಲಾಭಗಳ ಬಗ್ಗೆ ಮಾಹಿತಿ ನೀಡಿದರು.

ಸಹಾಯಕ ಪ್ರಾಧ್ಯಾಪಕ ಸಂಜೀವ್ ಕ್ಯಾತಪ್ಪನವರ್ ಮಾತನಾಡಿ, ವನಮಹೋತ್ಸವ ಪ್ರಾಮುಖ್ಯತೆ ಮತ್ತು ಆರಣ್ಯ ಇಲಾಖೆಯಲ್ಲಿರುವ ಯೋಜನೆಗಳ ಮಾಹಿತಿ ಪಡೆಯಬೇಕೆಂದು ಹೇಳಿದರು.

ಸಂಯೋಜಕ ಶ್ರೀನಿವಾಸ ರೆಡ್ಡಿ, ಗ್ರಾಮೀಣ ಕೃಷಿ ಅನುಭವ ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಡೀನ್ ಪಿ.ವೆಂಕಟರವಣ, ಪ್ರಾಧ್ಯಾಪಕರಾದ ಎನ್.ಮಂಜುಳ, ಜಿ.ದಾಕ್ಷಾಯಿಣಿ, ಕ್ಷೇತ್ರ ಅಧೀಕ್ಷಕ ವೆಂಕಟಾಚಲಪತಿ, ಸರ್ಕಾರಿ ಶಾಲೆ ಶಿಕ್ಷಕರು, ವಿದ್ಯಾರ್ಥಿಗಳು, ಊರಿನ ಹಿರಿಯರು ಭಾಗವಹಿಸಿದ್ದರು.

ಚಿಂತಾಮಣಿಯ ರೇಷ್ಮೆ ಕೃಷಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಮುದುವಾಡಿ ಹೊಸಹಳ್ಳಿಯಲ್ಲಿ ಕೃಷಿ ಮಾಹಿತಿ ಕೇಂದ್ರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಗಿಡ ನೆಟ್ಟರು
ಚಿಂತಾಮಣಿಯ ರೇಷ್ಮೆ ಕೃಷಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಮುದುವಾಡಿ ಹೊಸಹಳ್ಳಿಯಲ್ಲಿ ಕೃಷಿ ಮಾಹಿತಿ ಕೇಂದ್ರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಗಿಡ ನೆಟ್ಟರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT