ಚಿಂತಾಮಣಿ: ತಾಲ್ಲೂಕಿನ ಅಕ್ಕಿಮಂಗಲ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಯ ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷ ಆಗಿ ವೆಂಕಟೇಶಪ್ಪ, ಉಪಾಧ್ಯಕ್ಷ ಆಗಿ ಹನುಮಪ್ಪ ಅವಿರೋಧವಾಗಿ ಆಯ್ಕೆಯಾದರು.

ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ವೆಂಕಟೇಶಪ್ಪ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಹನುಮಪ್ಪ ಮಾತ್ರವೇ ನಾಮಪತ್ರ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಈ ಇಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಘೋಷಣೆ ಮಾಡಿದರು.

ನೂತನ ಅಧ್ಯಕ್ಷ ವೆಂಕಟೇಶಪ್ಪ ಮಾತನಾಡಿ, ಗ್ರಾಮದಲ್ಲಿ ಸೌಹಾರ್ದತೆಯ ಹೊಸ ಇತಿಹಾಸ ನಿರ್ಮಾಣವಾಗಿದ್ದು ಆಡಳಿತ ಮಂಡಳಿಯ ಎಲ್ಲ ನಿರ್ದೇಶಕರು, ಅಧ್ಯಕ್ಷ, ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಸಂಘದಲ್ಲಿ ಯಾವುದೇ ಪಕ್ಷ ಬೇಧವಿಲ್ಲದೆ ಎಲ್ಲ ನಿರ್ದೇಶಕರ ಸಹಕರದಿಂದ ಇದೇ ವಾತಾವರಣ ಮುಂದುವರೆಸಿಕೊಂಡು ಹೋಗುತ್ತೇವೆ ಎಂದರು.

ಸರ್ಕಾರ ಮತ್ತು ಒಕ್ಕೂಟದಿಂದ ಹಾಲು ಉತ್ಪಾದಕರಿಗೆ ದೊರೆಯುವ ಸೌಲಭ್ಯಗಳನ್ನು ಒದಗಿಸಲು ಮತ್ತು ಡೇರಿಯ ಅಭಿವೃದ್ಧಿಗೆ ಪ್ರಮಾಣಿಕ ಪ್ರಯತ್ನ ಮಾಡುತ್ತೇವೆ ಎಂದರು.

ನಿರ್ದೇಶಕರಾದ ಎ.ಟಿ.ಚಂದ್ರಶೇಖರ್, ಎಂ. ಮುನಿರಾಮಪ್ಪ, ಎನ್.ಮಂಜುನಾಥ್, ವೆಂಕಟರೆಡ್ಡಿ, ಶ್ರೀನಿವಾಸ್, ಸಾವಿತ್ರಮ್ಮ, ಪಿ.ರವೀಂದ್ರ, ಎ.ಎನ್.ಸುರೇಶ್, ಕವಿತ, ಲಲಿತಮ್ಮ, ಕಾರ್ಯದರ್ಶಿ ಶಿವಕುಮಾರ್, ಮುನಿರೆಡ್ಡಿ, ಬೈರಾರೆಡ್ಡಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-16-928407159

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.