ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿ ವೇತನ ಸದ್ಬಳಕೆಗೆ ಕಿವಿಮಾತು: ಸಿ.ಎಸ್. ಪ್ರಶಾಂತ್

Last Updated 29 ಮೇ 2022, 4:38 IST
ಅಕ್ಷರ ಗಾತ್ರ

ಚಿಂತಾಮಣಿ: ‘ಬಡ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಬೆಳಕಿಗೆ ತರುವುದು ಹಾಗೂ ಅವರಿಗೂ ಉತ್ತಮ ಶಿಕ್ಷಣ ದೊರೆಯಬೇಕು ಎಂಬ ಉದ್ದೇಶದಿಂದ ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ ಯೋಜನೆಯಡಿ ಶಿಷ್ಯವೇತನ ನೀಡಲಾಗುತ್ತಿದೆ’ ಎಂದು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಜಿಲ್ಲಾ ನಿರ್ದೇಶಕ ಸಿ.ಎಸ್. ಪ್ರಶಾಂತ್ ತಿಳಿಸಿದರು.

ಸಂಸ್ಥೆಯ ತಾಲ್ಲೂಕು ಘಟಕದಿಂದ ಶುಕ್ರವಾರ ನಗರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನವನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ವಿದ್ಯಾಭ್ಯಾಸ ಮಾಡಬೇಕು. ಮುಂದೆ ಉನ್ನತ ಸ್ಥಾನಮಾನ ಪಡೆಯುವ ಮೂಲಕ ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ತಿಳಿಸಿದರು.

ವೃತ್ತಿಪರ ಕೋರ್ಸ್‌ಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ತಾಲ್ಲೂಕಿನ 20 ವಿದ್ಯಾರ್ಥಿಗಳಿಗೆ ಶಿಷ್ಯವೇತನದ ಪ್ರಮಾಣ ಪತ್ರಗಳ ವಿತರಣೆ ಹಾಗೂ ಆರೋಗ್ಯ ರಕ್ಷಾ ಯೋಜನೆಯಡಿ ಹತ್ತು ಮಂದಿಗೆ ತಲಾ ₹ 10 ಸಾವಿರ ಮೊತ್ತದ ಚೆಕ್ ವಿತರಿಸ
ಲಾಯಿತು.

ತಾಲ್ಲೂಕು ಯೋಜನಾಧಿಕಾರಿ ಶಾರಿಕಾ, ಕೃಷಿ ಅಧಿಕಾರಿ ಉಮೇಶ್, ಕಚೇರಿ ಪ್ರಬಂಧಕ ವಿಜಯ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT