ಬುಧವಾರ, ಜೂನ್ 16, 2021
23 °C
ಶುಕ್ರವಾರ ರಾತ್ರಿ ಕೋವಿಡ್‌ ಆಸ್ಪತ್ರೆಯಿಂದ ಕಾಣೆ, ಗುಂತಪ್ಪನಹಳ್ಳಿ ಗ್ರಾಮದ ಬಳಿ ನೇಣಿಗೆ ಶರಣು

ಚಿಕ್ಕಬಳ್ಳಾಪುರ | ಪರಾರಿಯಾಗಿದ್ದ ಸೋಂಕಿತ ವ್ಯಕ್ತಿ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ನಗರದ ಕೋವಿಡ್‌ ಆಸ್ಪತ್ರೆಯಿಂದ ಶುಕ್ರವಾರ ರಾತ್ರಿ ಪರಾರಿಯಾಗಿದ್ದ ಕೋವಿಡ್‌ 19 ಸೋಂಕಿತ ವ್ಯಕ್ತಿಯೊಬ್ಬರು ತಾಲ್ಲೂಕಿನ ಗುಂತಪ್ಪನಹಳ್ಳಿ ಗ್ರಾಮದ ಬಳಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚಿಂತಾಮಣಿ ತಾಲ್ಲೂಕಿನ ಸೀತಾರಾಮಪುರ ಗ್ರಾಮದ ಆಂಜಿನಪ್ಪ (55) ಆತ್ಮಹತ್ಯೆ ಮಾಡಿಕೊಂಡವರು. ಕೆಲ ದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದ ಆಂಜಿನಪ್ಪ ಅವರನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎನ್ನಲಾಗಿದೆ.

ಈ ವೇಳೆ ವೈದ್ಯರು ಅವರ ಗಂಟಲು ದ್ರವದ ಮಾದರಿ ಪರೀಕ್ಷೆ ನಡೆಸಿದ್ದರು. ಆಗ ಅವರಿಗೆ ಕೋವಿಡ್‌ ತಗುಲಿದ್ದು ತಿಳಿದು ಬಂದಿತ್ತು. ಹೀಗಾಗಿ, ಅವರನ್ನು ಕೋವಿಡ್‌ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.

'ಶುಕ್ರವಾರ ರಾತ್ರಿ ಕೋವಿಡ್‌ ಆಸ್ಪತ್ರೆ ಸಿಬ್ಬಂದಿಯ ಪಾಳಿ ಬದಲಾವಣೆ ಸಂದರ್ಭದಲ್ಲಿ ಆಂಜಿನಪ್ಪ ಅವರು ಆಸ್ಪತ್ರೆಯಿಂದ ತಪ್ಪಿಸಿಕೊಂಡು ಹೋಗಿ ಗುಂತಪ್ಪನಹಳ್ಳಿ ಬಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಹಂಗಾಮಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ರಮೇಶ್‌ ತಿಳಿಸಿದರು.

ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಗ್ಯ ಇಲಾಖೆ ಸಿಬ್ಬಂದಿ ಸೀತಾರಾಮಪುರ ಗ್ರಾಮದ ಆಂಜಿನಪ್ಪ ಅವರ ಮನೆ ಪ್ರದೇಶ ಸೀಲ್‌ಡೌನ್ ಮಾಡಿದ್ಧಾರೆ. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು