ಮಂಗಳವಾರ, ಮಾರ್ಚ್ 2, 2021
31 °C

ಆದರ್ಶ ವಿದ್ಯಾಲಯಕ್ಕೆ ಅರ್ಜಿ ಆಹ್ವಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಾಗೇಪಲ್ಲಿ: ತಾಲ್ಲೂಕಿನ ದೇವರಗುಡಿಪಲ್ಲಿಯ ಸರ್ಕಾರಿ ಆದರ್ಶ ವಿದ್ಯಾಲಯದ 2020-21ನೇ ಸಾಲಿಗೆ ಶಾಲೆಯಲ್ಲಿ 7 ಮತ್ತು 9ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಸಾಮಾನ್ಯ ಪ್ರವೇಶ ಪರೀಕ್ಷೆಗಾಗಿ 7 ಮತು 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ತಾಲ್ಲೂಕಿನ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ವಿದ್ಯಾಲಯದ ಮುಖ್ಯಶಿಕ್ಷಕ ಎನ್.ವಿ. ಬೈರೆಡ್ಡಿ ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಡಿ. 4ರಂದು ಆದರ್ಶ ಶಾಲೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಡಿ. 12 ಅರ್ಜಿ ಸಲ್ಲಿಸಲು ಕೊನೆಯ ದಿನ. ಡಿ. 18ರಂದು ಬೆಳಿಗ್ಗೆ 10.30ರಿಂದ 1.30ರವರೆಗೆ ಪ್ರವೇಶ ಪರೀಕ್ಷೆ ನಡೆಸಲಾಗುವುದು.

ಹೆಚ್ಚಿನ ಮಾಹಿತಿಗೆ ಆದರ್ಶ ವಿದ್ಯಾಲಯದ ಮುಖ್ಯೋಪಾಧ್ಯಾಯರ ಮೊಬೈಲ್ 99808 55191 ಸಂಪರ್ಕಿಸಬಹುದು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.