ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರಂಭಿಕ ಶಿಕ್ಷಣಕ್ಕೆ ಮೊದಲ ಆದ್ಯತೆ

Last Updated 9 ನವೆಂಬರ್ 2021, 4:36 IST
ಅಕ್ಷರ ಗಾತ್ರ

ಶಿಡ್ಲಘಟ್ಟ: ತಾಲ್ಲೂಕಿನೆಲ್ಲೆಡೆ ಅಂಗನವಾಡಿಯ ಪುನರಾರಂಭವನ್ನು ವಿಶೇಷ ಕಾರ್ಯಕ್ರಮದ ರೀತಿಯಲ್ಲಿ ಆಚರಣೆ ಮಾಡಲಾಯಿತು. ಕೆಲವೆಡೆ ಸರಸ್ವತಿಪೂಜೆ ಮಾಡಿದರೆ, ಬಹುತೇಕ ಕಡೆಗಳಲ್ಲಿ ಮಕ್ಕಳನ್ನು ಹೂ ಮತ್ತು ಸಿಹಿ ನೀಡಿ ಸ್ವಾಗತಿಸಲಾಯಿತು.

‘ಮಾನವ ಸಂಪನ್ಮೂಲ ಅಭಿವೃದ್ಧಿಯಲ್ಲಿ ಮಕ್ಕಳ ಆರಂಭಿಕ ಶಿಕ್ಷಣ ಪ್ರಮುಖ ಪಾತ್ರ ವಹಿಸಲಿದ್ದು ಮಗುವಿನ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಆದ್ಯತೆಯಾಗಬೇಕು’ ಎಂದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಎಚ್.ಎಸ್ ರುದ್ರೇಶ ಮೂರ್ತಿ ಹೇಳಿದರು.

‘ಮಗುವು ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢಗೊಳ್ಳಬೇಕಾದರೆ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳು ಚಟುವಟಿಕೆಗಳ ಮೂಲಕ ಕಲಿಯುವಂತೆ ಆಗಬೇಕು. ಮಗುವಿಗೆ ಆರಂಭದಿಂದಲೇ ಆಟ ಪಾಠ ಸಂಗೀತ ಮತ್ತಿತರ ಪ್ರಕ್ರಿಯೆಗಳು ನಿರಂತರವಾಗಿ ನಡೆಯಬೇಕು. ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗಿದ್ದು ಅಂಗನವಾಡಿಗಳು ಮತ್ತಷ್ಟು ಸಬಲಗೊಳ್ಳಲಿವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT