ಶನಿವಾರ, ಸೆಪ್ಟೆಂಬರ್ 25, 2021
22 °C
ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ನೌಕರರಿಂದ ಅನಿರ್ದಿಷ್ಟಾವಧಿ ಧರಣಿ

ಅಂಗನವಾಡಿ ಸಿಬ್ಬಂದಿ ಧರಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ಕೊರೊನಾ ಕೆಲಸದಲ್ಲಿ ನಿರತರಾದ ವೇಳೆ ಸೋಂಕಿನಿಂದ ಮೃತಪಟ್ಟ ಅಂಗನವಾಡಿ ಸಿಬ್ಬಂದಿಯ ಕುಟುಂಬಕ್ಕೆ ಪರಿಹಾರ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೋಮವಾರದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಅಂಗನವಾಡಿ ನೌಕರರ ಸಂಘ ಸದಸ್ಯರು ಅನಿರ್ದಿಷ್ಟಾವಧಿ ಧರಣಿಆರಂಭಿಸಿದ್ದಾರೆ.

ಕೇಂದ್ರ ಸರ್ಕಾರವು ಅಂಗನವಾಡಿ ಯೋಜನೆಗಳ ಸೌಲಭ್ಯವನ್ನು ಪಡೆಯುವ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಜಮೆ ಮಾಡಲು ಮುಂದಾಗಿದೆ. ಈ ಪ್ರಕ್ರಿಯೆಯನ್ನು ಕೈಬಿಡಬೇಕು. ಸೇವಾ ಜೇಷ್ಠತೆ ಆಧರಿಸಿ ಸಿಬ್ಬಂದಿಗೆ ವೇತನ ಹೆಚ್ಚಿಸಬೇಕು ಎಂದು ಅಂಗನವಾಡಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಜಿ.ಎಂ.ಲಕ್ಷ್ಮಿದೇವಮ್ಮ ಧರಣಿಯಲ್ಲಿ ಆಗ್ರಹಿಸಿದರು.

ಜಿಲ್ಲೆಯ ವಿವಿಧ ತಾಲ್ಲೂಕಿನ ಕಾರ್ಯಕರ್ತರು ಒಂದೊಂದು ದಿನ ಧರಣಿಯ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ನಂತರ ಬೆಂಗಳೂರಿನಲ್ಲಿ ಪ್ರತಿಭಟಿಸುತ್ತೇವೆ ಎಂದು ಹೇಳಿದರು.

 ಕೊರೊನಾ ಕೆಲಸದ ಒತ್ತಡದಿಂದ 35 ಸಿಬ್ಬಂದಿ, ಕೊರೊನಾ ಕರ್ತವ್ಯದಲ್ಲಿ ಇದ್ದಾಗ 28 ಸಿಬ್ಬಂದಿ
ಮೃತಪಟ್ಟಿದ್ದಾರೆ. 173 ಜನರಿಗೆ ಸೋಂಕು ತಗುಲಿದೆ. ಎರಡನೇ ಅಲೆಯ ಸಂದರ್ಭದಲ್ಲಿ 16 ಜನರು ಮೃತಪಟ್ಟಿದ್ದಾರೆ. ಆದರೆ ಇದುವರೆಗೂ ಮೃತರ ಕುಟುಂಬಗಳಿಗೆ ಪರಿಹಾರ ಧನ ನೀಡಿಲ್ಲ ಎಂದು ಹೇಳಿದರು.

ಐಸಿಡಿಎಸ್ ಯೋಜನೆಗೆ ಅನುದಾನ ಹೆಚ್ಚಿಸಬೇಕು. ಬಜೆಟ್‌ನಲ್ಲಿ ಕಡಿತವಾಗಿರುವ ₹ 8452.38 ಕೋಟಿ ಹಣ ವಾಪಸ್ ನೀಡಬೇಕು. ಖಾಲಿ ಇರುವ ಸಹಾಯಕಿಯರು, ಕಾರ್ಯಕರ್ತೆಯರು, ಸಿಬ್ಬಂದಿ ಹುದ್ದೆಗಳನ್ನು ಭರ್ತಿ ಮಾಡಬೇಕು. ಮುಂಬಡ್ತಿ, ವರ್ಗಾವಣೆ, ಪೌಷ್ಟಿಕ ಆಹಾರ ಸರಬರಾಜು ವಿಚಾರದಲ್ಲಿ ರಾಜಕೀಯ ಮಧ್ಯಪ್ರವೇಶಿಸಬಾರದು ಎಂದು ಆಗ್ರಹಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಅಮರೇಶ್ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಸಂಘಟನೆಯ ‌ಕೆ.ರತ್ನಮ್ಮ, ವೆಂಕಟಲಕ್ಷ್ಮಮ್ಮ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು