ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂದುವರಿದ ಅಂಗನವಾಡಿ ಸಿಬ್ಬಂದಿ ಮುಷ್ಕರ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಹೋರಾಟ
Last Updated 18 ಆಗಸ್ಟ್ 2021, 3:20 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಕೊರೊನಾ ಕೆಲಸದಲ್ಲಿ ನಿರತರಾದ ವೇಳೆ ಸೋಂಕಿನಿಂದ ಮೃತಪಟ್ಟ ಅಂಗನವಾಡಿ ಸಿಬ್ಬಂದಿಯ ಕುಟುಂಬಕ್ಕೆ ಪರಿಹಾರ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಅಂಗನವಾಡಿ ನೌಕರರ ಸಂಘ ಸದಸ್ಯರು ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಧರಣಿ ಮಂಗಳವಾರ ಎರಡನೇ ದಿನಕ್ಕೆ
ಕಾಲಿಟ್ಟಿದೆ.

ಎರಡನೇ ದಿನದ ಪ್ರತಿಭಟನೆಯಲ್ಲಿ ಗೌರಿಬಿನೂರು ತಾಲ್ಲೂಕಿನ ಅಂಗನವಾಡಿ ಕೇಂದ್ರಗಳ ಸಿಬ್ಬಂದಿ ಪಾಲ್ಗೊಂಡಿದ್ದರು. ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ತಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.

ಸ್ಥಳಕ್ಕೆ ಭೇಟಿ ನೀಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ನಟರಾಜ್, ನಿರೂಪಣಾಧಿಕಾರಿ ಪದ್ಮರಾಜ್, ಸಿಡಿಪಿಒ ವೆಂಕಟೇಗೌಡ, ಜಿಲ್ಲಾ ಮಟ್ಟದಲ್ಲಿರುವ ಸಮಸ್ಯೆಗಳ ಪರಿಹಾರಕ್ಕೆ ಕ್ರಮವಹಿಸಿದ್ದೇವೆ. ಬೇಡಿಕೆಗಳ ಈಡೇರಿಕೆಗಳಿಗೆ ಸಂಬಂಧಿಸಿದಂತೆ ನೀಡಿರುವ ಮನವಿ ಪತ್ರವನ್ನು ಸರ್ಕಾರಕ್ಕೆ ಕಳುಹಿಸಿದ್ದೇವೆ
ಎಂದರು.

ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಬಿ.ಎನ್.ಮುನಿಕೃಷ್ಣಪ್ಪ, ಅಂಗನವಾಡಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿದ್ಧಗಂಗಪ್ಪ, ಜಿಲ್ಲಾ ಅಧ್ಯಕ್ಷೆ ಲಕ್ಷ್ಮಿದೇವಮ್ಮ, ನಾಗರತ್ನಮ್ಮ, ಜಯಮಂಗಲ, ರಾಧಾ, ಕಲ್ಪನ, ವೆಂಕಟಲಕ್ಷ್ಮಮ್ಮ ಹಾಗೂ ಗೌರಿಬಿದನೂರು ತಾಲ್ಲೂಕು ಸಂಘಟನೆಯ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ
ಪಾಲ್ಗೊಂಡಿದ್ದರು.

ಬುಧವಾರ (ಆ.18)ದ ಪ್ರತಿಭಟನೆಯ ನೇತೃತ್ವವನ್ನು ಶಿಡ್ಲಘಟ್ಟ ತಾಲ್ಲೂಕು ಅಂಗನವಾಡಿ ಸಿಬ್ಬಂದಿ ವಹಿಸುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT