ಶುಕ್ರವಾರ, ಡಿಸೆಂಬರ್ 4, 2020
22 °C

ಅನ್ನದಾನ ಕಾರ್ಯಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚೇಳೂರು: ತಾಲ್ಲೂಕಿನ ನಿವೃತ್ತ ವೈದ್ಯಾಧಿಕಾರಿ ಡಾ.‌ಆರ್. ಸುಬ್ರಮಣ್ಯಂ ಅಯ್ಯರ್ ಅವರ ನಿಧನದ ಹಿನ್ನೆಲೆಯಲ್ಲಿ ಗ್ರಾಮದ ಎಂ.ಜಿ. ವೃತ್ತದಲ್ಲಿ ಅವರ ಅಭಿಮಾನಿಗಳಿಂದ ಅನ್ನದಾನ ಕಾರ್ಯಕ್ರಮ ನಡೆಯಿತು.

‘ಅಯ್ಯರ್ ಅವರು ಗ್ರಾಮ ಪಂಚಾಯಿತಿಯಲ್ಲಿ ಗೆದ್ದು ಜನಪರ ಕೆಲಸ ಮಾಡಿ ಉತ್ತಮ ಹೆಸರುಗಳಿಸಿದ್ದರು. ರಾಜಕೀಯದ ಜೊತೆಗೆ ವೈದ್ಯ ವೃತ್ತಿಯನ್ನೂ ಮಾಡುತ್ತಿದ್ದರು. ರೋಗಗಳ ನೋವಿಗೆ ಸ್ಪಂದಿಸುತ್ತಿದ್ದ ಅವರ ಮಾನವೀಯ ಮೌಲ್ಯಗಳು ಎಲ್ಲರಿಗೂ ಮಾದರಿಯಾಗಿವೆ’ ಎಂದು ಅಭಿಮಾನಿಗಳು ಸ್ಮರಿಸಿದರು. 

ಕರವೇ ತಾಲ್ಲೂಕು ಉಪಾಧ್ಯಕ್ಷ ಕೆ.ಜಿ. ವೆಂಕಟರಮಣಪ್ಪ, ವರ್ತಕರ ಸಂಘದ ಮುಖಂಡರಾದ ಭೂಪಾಳಂ ಬಿ.ಎಸ್. ಭಾನುಪ್ರಕಾಶ್, ಮೀಸಾಲು ರವಿ, ಪಾತೂರು ಕೆ.ವಿ. ಶಂಕರಪ್ಪ ಹಾಜರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.