ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಡಿಬಂಡೆ: ರೈತ ವಿರೋಧಿ ಸರ್ಕಾರ ತೊಲಗಲಿ- ಲಕ್ಷ್ಮೀನಾರಾಯಣ

Last Updated 11 ಆಗಸ್ಟ್ 2021, 5:40 IST
ಅಕ್ಷರ ಗಾತ್ರ

ಗುಡಿಬಂಡೆ: ‘ಈಸ್ಟ್ ಇಂಡಿಯಾ ಕಂಪನಿ ತೊಲಗಿಸಲು ಕ್ವಿಟ್ ಇಂಡಿಯಾ ಚಳವಳಿಯನ್ನು ದೊಡ್ಡ ಮಟ್ಟದಲ್ಲಿ ನಡೆಸಲಾಯಿತು. ಅದೇ ರೀತಿ ಇಂದು ರೈತ ವಿರೋಧಿ ನರೇಂದ್ರ ಮೋದಿ ಸರ್ಕಾರವನ್ನು ತೊಲಗಿಸಲು ಕೆಲಸ ಮಾಡಬೇಕಿದೆ’ ಎಂದು ಕೆಪಿಆರ್‌ಎಸ್ ಜಿಲ್ಲಾ ಕಾರ್ಯದರ್ಶಿ ಲಕ್ಷ್ಮೀನಾರಾಯಣ ತಿಳಿಸಿದರು.

ಪಟ್ಟಣದ ತಾಲ್ಲೂಕು ಕಚೇರಿ ಮುಂಭಾಗ ಕೆಪಿಆರ್‌ಎಸ್, ಸಿಐಟಿಯು, ಕೃಷಿ, ಕೂಲಿಕಾರರ ಸಂಘ ಸೇರಿದಂತೆ ಹಲವು ಸಂಘಟನೆಗಳ ಸಹಯೋಗದಲ್ಲಿ ಕ್ವಿಟ್ ಇಂಡಿಯಾ ಚಳವಳಿಯ ನೆನಪಿನಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು.

ದೇಶದ ಎಲ್ಲ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಖಾಸಗೀಕರಣ ಮಾಡಲು ಮೋದಿ ಸರ್ಕಾರ ಹಂತ ಹಂತವಾಗಿ ಯೋಜನೆ ರೂಪಿಸಿದೆ. ಜೊತೆಗೆ ವಿದೇಶಿ ಕಂಪನಿಗಳಿಗೆ ಮುಕ್ತ ಅವಕಾಶ ನೀಡಿ, ಭಾರತದಲ್ಲಿನ ಕಾರ್ಮಿಕರನ್ನು ನಿಮಗೆ ಬೇಕಾದ ರೀತಿಯಲ್ಲಿ ದುಡಿಸಿಕೊಳ್ಳಬಹುದು ಎಂದು ಹೇಳುತ್ತಿದೆ. ದೆಹಲಿಯಲ್ಲಿ ಸುಮಾರು ತಿಂಗಳುಗಳಿಂದ ರೈತ ವಿರೋಧಿ ಕಾಯ್ದೆಗಳನ್ನು ರದ್ದು ಮಾಡಿ ಎಂದು ಹೋರಾಟ ನಡೆಸುತ್ತಿರುವ ರೈತರ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿದೆ
ಎಂದರು.

ಸಿಐಟಿಯು ತಾಲ್ಲೂಕು ಕಾರ್ಯದರ್ಶಿ ಭಾಗ್ಯಮ್ಮ ಮಾತನಾಡಿ, ಅಂಗನವಾಡಿ ನೌಕರರನ್ನು ಸರ್ಕಾರ ನಿರ್ಲಕ್ಷ್ಯದಿಂದ ನೋಡುತ್ತಿವೆ. ಕೆಲಸದಭದ್ರತೆಯಿಲ್ಲದೆ ಸುಮಾರು ವರ್ಷಗಳಿಂದ ಕೆಲಸ ಮಾಡಿಕೊಂಡು ಬರುತ್ತಿದ್ದು, ಉದ್ಯೋಗ ಭದ್ರತೆ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕೆ ಮನವಿ ಮಾಡುತ್ತಿದ್ದರೂ ಸರ್ಕಾರ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ
ಎಂದರು.

ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಜಯರಾಮರೆಡ್ಡಿ, ಮುಖಂಡ ಶ್ರೀನಿವಾಸ್, ದೇವರಾಜ್, ಆದಿನಾರಾಯಣಸ್ವಾಮಿ, ಸಿಐಟಿಯು ಸಂಘಟನೆಯ ಅಧ್ಯಕ್ಷೆ ವೆಂಕಟರತ್ನಮ್ಮ, ಶುಭ, ಶಾಂತಮ್ಮ, ರತ್ನಮ್ಮ, ಸುಜಾತಾ, ಪ್ರಮೀಳಮ್ಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT