ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಪಿಎಂಸಿ‌ ಕಾಯ್ದೆ ತಿದ್ದುಪಡಿ ರೈತರ ಪ್ರತಿಭಟನೆ

Last Updated 27 ಮೇ 2020, 17:20 IST
ಅಕ್ಷರ ಗಾತ್ರ

ಗೌರಿಬಿದನೂರು: ಜನ ವಿರೋಧದ ನಡುವೆಯೂ ಎಪಿಎಂಸಿ ಕಾಯ್ದೆಯನ್ನು ತಿದ್ದುಪಡಿ ಮಾಡಿ ಸುಗ್ರೀವಾಜ್ಞೆ ಹೊರಡಿಸಿರುವ ಆತುರದ ನಿರ್ಧಾರವನ್ನು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತೀವ್ರವಾಗಿ ವಿರೋಧಿಸುತ್ತದೆ ಎಂದು ಜಿಲ್ಲಾ ಘಟಕದ ಅಧ್ಯಕ್ಷ ಲಕ್ಷ್ಮಿನಾರಾಯಣರೆಡ್ಡಿ ತಿಳಿಸಿದರು.

ತಾಲ್ಲೂಕು ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ವರ್ತಕರು ಹಾಗೂ ಲಕ್ಷಾಂತರ ನೌಕರರು, ಹಮಾಲರು ಬೀದಿಗೆ ಬೀಳುವ ಪರಿಸ್ಥಿತಿ ಬರುತ್ತದೆ. ಇದರಿಂದ ಕಾರ್ಪೊರೇಟ್ ಕಂಪನಿಗಳು ಲೂಟಿ ಹೊಡೆಯಲು ದಾರಿ ಮಾಡಿಕೊಟ್ಟಂತಾಗುತ್ತದೆ ಎಂದರು.

ತಹಶೀಲ್ದಾರ್ ಎಂ.ರಾಜಣ್ಣ ಅವರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ತಾಲ್ಲೂಕು ಘಟಕದ ಅಧ್ಯಕ್ಷ ನವೀನ್ ಕುಮಾರ್, ಕಾರ್ಯದರ್ಶಿ ಪ್ರಭಾಕರ್ ರೆಡ್ಡಿ, ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ್ ರೆಡ್ಡಿ, ಮುಖಂಡರಾದ ಕೆ.ನಾರಾಯಣಸ್ವಾಮಿ, ರವಿಪ್ರಕಾಶ್, ಸೋಮಶೇಖರ್, ವೆಂಕಟೇಶ್‍ ಬಾಬು, ನವೀನ್ ಕುಮಾರ್, ರಾಮಚಂದ್ರಪ್ಪ, ಕೃಷ್ಣಾರೆಡ್ಡಿ, ಮಂಜುನಾಥ್, ಚಿಗಟಗೆರೆ ಶ್ರೀನಿವಾಸ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT