ಶನಿವಾರ, ಮಾರ್ಚ್ 25, 2023
29 °C

ರೈತ ಪ್ರಶಸ್ತಿಗೆ ಅರ್ಜಿ ಆಹ್ವಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಂತಾಮಣಿ: ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು ಕೃಷಿ ಮೇಳ ಆಯೋಜಿಸಲಿದ್ದು, ಈ ಸಂದರ್ಭದಲ್ಲಿ ನೀಡುವ ಕೃಷಿ ಪ್ರಶಸ್ತಿಗಳಿಗೆ ರೈತ ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೃಷಿ ವಿಜ್ಞಾನ ಕೇಂದ್ರದ ಪ್ರಕಟಣೆ ತಿಳಿಸಿದೆ.

ಮೇಳದಲ್ಲಿ ಜಿಲ್ಲಾಮಟ್ಟದ ಪ್ರಗತಿಪರ ರೈತ ಮತ್ತು ರೈತ ಮಹಿಳೆ ಪ್ರಶಸ್ತಿ, ತಾಲ್ಲೂಕುಮಟ್ಟದ ಯುವ ರೈತ ಮತ್ತು ರೈತ ಮಹಿಳೆಯ ಪ್ರಶಸ್ತಿ, ಡಾ.ಎಂ.ಎಚ್. ಮರಿಗೌಡ ರಾಜ್ಯಮಟ್ಟದ ಅತ್ಯುತ್ತಮ ತೋಟಗಾರಿಕಾ ರೈತ ಪ್ರಶಸ್ತಿ, ಮಾಜಿ ಪ್ರಧಾನ ಮಂತ್ರಿ ಎಚ್.ಡಿ. ದೇವೇಗೌಡ ರಾಜ್ಯಮಟ್ಟದ ಅತ್ಯುತ್ತಮ ರೈತ ಮತ್ತು ರೈತ ಮಹಿಳೆ ಪ್ರಶಸ್ತಿ, ಕ್ಯಾನ್ ಬ್ಯಾಂಕ್ ಅತ್ಯುತ್ತಮ ಕೃಷಿಕ ಪ್ರಶಸ್ತಿ, ಡಾ.ಆರ್. ದ್ವಾರಕೀನಾಥ್ ಅತ್ಯುತ್ತಮ ರೈತ ಪ್ರಶಸ್ತಿ ಸೇರಿದಂತೆ ಒಟ್ಟು 6 ಪ್ರಶಸ್ತಿ ನೀಡಲಾಗುತ್ತದೆ.

ಆಸಕ್ತಿಯುಳ್ಳ ಚಿಕ್ಕಬಳ್ಳಾಪುರ ಜಿಲ್ಲೆಯ ರೈತರು ನಿಗದಿತ ಅರ್ಜಿ ನಮೂನೆಯಲ್ಲಿ ವಿವರ ಸಲ್ಲಿಸುವಂತೆ ಕೋರಲಾಗಿದೆ. ಅರ್ಜಿ ನಮೂನೆಯನ್ನು ಕೃಷಿ, ತೋಟಗಾರಿಕೆ, ಪಶು ಸಂಗೋಪನೆ, ರೇಷ್ಮೆ, ಮೀನುಗಾರಿಕೆ ಮತ್ತು ಅರಣ್ಯ ಇಲಾಖೆಯ ಜಿಲ್ಲಾ ಮತ್ತು ತಾಲ್ಲೂಕು ಕಚೇರಿ, ಕೃಷಿ ವಿಜ್ಞಾನ ಕೇಂದ್ರ, ಕುರಬೂರು ಫಾರಂ ಅಥವಾ ಕೃಷಿ ವಿಶ್ವವಿದ್ಯಾಲಯದ ವೆಬ್‌ಸೈಟ್‌ನಿಂದಲೂ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಜಿಲ್ಲಾ ಅಥವಾ ತಾಲ್ಲೂಕು ಕೃಷಿ ಇಲಾಖೆಯ ಅಧಿಕಾರಿಗಳ ಶಿಫಾರಸು ಪಡೆದು ಕೃಷಿ ವಿಜ್ಞಾನ ಕೇಂದ್ರದಲ್ಲಿ ಸಲ್ಲಿಸಲು ಜುಲೈ 25 ಕೊನೆಯ ದಿನವಾಗಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು