ಸೋಮವಾರ, ಜನವರಿ 17, 2022
20 °C

ಜೆಡಿಎಸ್ ಜಿಲ್ಲಾ ಯುವ ಘಟಕದ ಅಧ್ಯಕ್ಷರ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಂತಾಮಣಿ: ಜಿಲ್ಲಾ ಜೆಡಿಎಸ್ ಯುವ ಘಟಕದ ಅಧ್ಯಕ್ಷರಾಗಿ ಚಿಂತಾಮಣಿಯ ಜಿ.ಕೆ. ಮಧು ಅವರನ್ನು ನೇಮಕ ಮಾಡಲಾಗಿದೆ.

ಇದುವರೆಗೆ ತಾಲ್ಲೂಕಿನ ಗೋಪಲ್ಲಿಯ ಜಿ.ಎಸ್. ರಘುನಾಥರೆಡ್ಡಿ ಅಧ್ಯಕ್ಷರಾಗಿದ್ದರು. ಅವರಿಂದ ಅಧ್ಯಕ್ಷ ಸ್ಥಾನ ಹಿಂಪಡೆದು ಮಧು ಅವರನ್ನು ನೇಮಕ ಮಾಡಲಾಗಿದೆ ಎಂದು ಪಕ್ಷದ ಜಿಲ್ಲಾ ಅಧ್ಯಕ್ಷ ಕೆ.ಎಂ. ಮುನೇಗೌಡ ತಿಳಿಸಿದ್ದಾರೆ.

ರಘುನಾಥರೆಡ್ಡಿ ಪಕ್ಷದ ಯುವ ಘಟಕದ ಸಂಘಟನೆಯಲ್ಲಿ ಕಾರ್ಯ ನಿರ್ವಹಿಸಲು ವಿಫಲರಾಗಿದ್ದಾರೆ. ಪಕ್ಷ ಸಂಘಟನೆ ಹಾಗೂ ಇತರೇ ಕಾರ್ಯಕ್ರಮಗಳಲ್ಲಿ ಭಾಗವಹಿಸದ ಕಾರಣದಿಂದ ಅವರನ್ನು ಅಧ್ಯಕ್ಷ ಸ್ಥಾನದಿಂದ ತೆಗೆದು ಹಾಕಿ ಮಧು ಅವರನ್ನು ನೇಮಿಸಲಾಗಿದೆ ಎಂದು ಪ್ರಕಟಣೆಯಲ್ಲಿ
ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.