ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಶಾ ಕಾರ್ಯಕರ್ತೆಯರಿಗೆ ಸನ್ಮಾನ

Last Updated 1 ಏಪ್ರಿಲ್ 2021, 7:58 IST
ಅಕ್ಷರ ಗಾತ್ರ

ಶಿಡ್ಲಘಟ್ಟ: ಮಹಿಳೆಯರು ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಸ್ವಾವಲಂಬಿಗಳಾದಾಗ ಮಾತ್ರ ಸಮಗ್ರ ಸಮಾಜದ ಅಭಿವೃದ್ಧಿಯಾಗಲು ಸಾಧ್ಯ. ಬಾಲ್ಯ ವಿವಾಹ ಪದ್ದತಿಯನ್ನು ನಿರ್ಮೂಲನಗೊಳಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ನಾಗವೇಣಿ ತಿಳಿಸಿದರು.

‌ಮೇಲೂರು ಗ್ರಾ.ಪಂ, ಫೌಂಡೇಷನ್ ಫಾರ್ ಇಕಲಾಜಿಕಲ್ ಸೆಕ್ಯೂರಿಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸ್ತ್ರೀ ಶಕ್ತಿ ಸಂಘಗಳ ಒಕ್ಕೂಟ ಮತ್ತು ಸರಸ್ವತಿ ಸಂಜೀವಿನಿ ಸಹಯೋಗದಲ್ಲಿ ಮೇಲೂರಿನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಅಂತರರಾಷ್ಟೀಯ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿದರು.

‘ಮಹಿಳೆಯರ ಆರ್ಥಿಕ ಅಭಿವೃದ್ಧಿಯೊಂದಿಗೆ ಆರ್ಥಿಕ ಸಮಾನತೆ ಮತ್ತು ಸಾಮಾಜಿಕ ನ್ಯಾಯದೊಂದಿಗೆ ಸಮಗ್ರವಾಗಿ ಮುಖ್ಯವಾಹಿನಿಗೆ ಬರಬೇಕಿದೆ. ಮಹಿಳೆಯರಿಗೆ ಶಿಕ್ಷಣ, ಅರಿವು ಮೂಡಿಸುವ ಮೂಲಕ ಸಶಕ್ತರನ್ನಾಗಿ ಮಾಡಬೇಕು, ಅದರಲ್ಲೂ ಕೌಶಲ ಅಭಿವೃದ್ಧಿ ಮತ್ತು ಆರ್ಥಿಕ ಚಟುವಟಿಕೆ ಒತ್ತುಕೊಡುವ ಮೂಲಕ ದುಡಿಮೆಯ ಶಕ್ತಿ ಮತ್ತು ಜೀವನಮಟ್ಟ ಹೆಚ್ಚಿಸಬೇಕಿದೆ’ ಎಂದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಆರ್.ಎ.ಉಮೇಶ್ ಮಾತನಾಡಿ, ‘ಮಹಿಳೆಯರು ಸಾಮಾಜಿಕವಾಗಿ ಪ್ರಗತಿ ಸಾಧಿಸಬೇಕಾದರೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು’ ಎಂದರು.

ಕಾಕಚೊಕ್ಕಂಡಹಳ್ಳಿ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಸುಮಾ ಮಾತನಾಡಿ, ಮಕ್ಕಳಿಗೆ ಎಲ್ಕೇಜಿ, ಪ್ರಿಕೇಜಿ, ಶಿಕ್ಷಣ ಕೊಡಿಸುವ ಮೋಜಿಗೊಳಗಾಗದೆ ಮಕ್ಕಳಿಗೆ ತಾಯಿ ಪ್ರೀತಿ ಮೌಲ್ಯವನ್ನು ಕೊಡಿ ಎಂದರು.

ಕೋವಿಡ್ ನಿರ್ವಹಣೆ ಮಾಡಿದ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಹಾಗೂ ರಂಗೋಲಿ ಸ್ಪರ್ಧೆ, ಮ್ಯೂಜಿಕಲ್ಚೇರ್ ಸ್ಪರ್ಧೆಗಳಲ್ಲಿ ವಿಜೇತರಾದ ಸ್ತ್ರೀ ಸಂಘಗಳ ಸದಸ್ಯರಿಗೆ ಬಹುಮಾನ ವಿತರಣೆ ಮತ್ತು ಅನುಪಮ ಶಿಕ್ಷಕಿ ಪ್ರಶಸ್ತಿ ವಿಜೇತ ಮೇಲೂರಿನ ತನುಜಾಕ್ಷಿ ಅವರಿಗೆ ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಚಿಕ್ಕಬಳ್ಳಾಪುರ ಲೀಡ್ ಬ್ಯಾಂಕ್ ನ ಬಸವರಾಜ್, ಗ್ರಾ.ಪಂ ಸದಸ್ಯರಾದ ಭಾಗ್ಯಲಕ್ಷ್ಮಿ, ಶೋಭ, ಗೀತಾಂಜಲಿ, ಸವಿತಾ, ಅಂಬಿಕಾ, ಎಂ.ಕೆ.ರವಿಪ್ರಸಾದ್, ಎಂ.ಜೆ.ಶ್ರೀನಿವಾಸ್, ಸಿ.ಕೆ.ಗಜೇಂದ್ರಬಾಬು, ನಾರಾಯಣಸ್ವಾಮಿ, ದೇವರಾಜ್,ಸ್ತ್ರೀ ಸಂಘಗಳ ಒಕ್ಕೂಟ ಅಧ್ಯಕ್ಷೆ ಭಾರತಿ, ಕೆನರಾ ಬ್ಯಾಂಕ್ ವ್ಯವಸ್ಥಾಪಕ ಕುಮಾರ್, ಪಿಡಿಓ ಶಾರದಾ, ಸರ್ಕಾರಿ ಪ್ರೌಢ ಶಾಲೆಯ ಮುಖ್ಯಶಿಕ್ಷಕಿ ಸುಜಾತ, ಶ್ರೀ ಸಂಜೀವಿನಿ ಸರಸ್ವತಿ ಒಕ್ಕೂಟದ ಗಂಗೂಬಾಯಿ, ಗೌರಮ್ಮ, ಪ್ರೇಮ, ಸಂಪನ್ಮೂಲ ವ್ಯಕ್ತಿ ಸರೋಜ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT