ಆ.21 ರಂದು ರಾಜ್ಯಮಟ್ಟದ ಸಮ್ಮೇಳನ

7

ಆ.21 ರಂದು ರಾಜ್ಯಮಟ್ಟದ ಸಮ್ಮೇಳನ

Published:
Updated:

ಚಿಕ್ಕಬಳ್ಳಾಪುರ: ‘ಪ್ರಾಥಮಿಕ ಶಾಲಾ ಶಿಕ್ಷಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್ 21 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಮಟ್ಟದ ಶೈಕ್ಷಣಿಕ ಹಕ್ಕೋತ್ತಾಯ ಸಮ್ಮೇಳನ ಆಯೋಜಿಸಲಾಗಿದೆ’ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎ.ನಾರಾಯಣಸ್ವಾಮಿ ತಿಳಿಸಿದರು.

ನಗರದಲ್ಲಿ ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಸಮ್ಮೇಳನದಲ್ಲಿ ರಾಜ್ಯದಲ್ಲಿ ಪ್ರಾಥಮಿಕ ಶಿಕ್ಷಣದ ಅಮೂಲಾಗ್ರ ಬದಲಾವಣೆಗೆ ರಾಜ್ಯ ಸರ್ಕಾರಕ್ಕೆ ಹಕ್ಕೋತ್ತಾಯ ಮಾಡಲಾಗುತ್ತದೆ. ಸರ್ಕಾರಿ ಶಾಲೆಗಳ ಸಬಲೀಕರಣಕ್ಕಾಗಿ ಸಂಘ ನೀಡಿದ ವರದಿಯನ್ನು ಸರ್ಕಾರ ಅನುಷ್ಟಾನಗೊಳಿಸಬೇಕು. ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪ್ರಥಮ ದರ್ಜೆ ಸಹಾಯಕರು ಪಡೆಯುವ ವೇತನ ಶ್ರೇಣಿ ನಿಗದಿಗೊಳಿಬೇಕು’ ಎಂದು ಆಗ್ರಹಿಸಲಾಗುತ್ತದೆ’ ಎಂದು ಹೇಳಿದರು.

‘ಪ್ರಾಥಮಿಕ ಶಾಲಾ ಶಿಕ್ಷಕರು, ದೈಹಿಕ ಶಿಕ್ಷಕರು, ಮುಖ್ಯ ಶಿಕ್ಷಕರಿಗೆ ಬಡ್ತಿ ನೀಡುವ ಸಂಬಂದ ವೃಂದ ಹಾಗೂ ನೇಮಕಾತಿ ನಿಯಮಗಳಲ್ಲಿ ಸಮಗ್ರ ಬದಲಾವಣೆ ಮಾಡಬೇಕಿದೆ. ಜತೆಗೆ ಬಡ್ತಿಗೆ ನಿಗದಿಗೊಳಿಸಿರುವ ಪರೀಕ್ಷಾ ಪದ್ಧತಿಯನ್ನು ಕೂಡಲೇ ಕೈ ಬಿಡುವಂತೆ ಒತ್ತಾಯಿಸಲಾಗುತ್ತದೆ. ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ ನೀಡಬೇಕು. ನೂತನ ಪಿಂಚಣಿ ಯೋಜನೆಯನ್ನು ಕೂಡಲೇ ರದ್ದುಗೊಳಿಸಿ ಹಳೆ ಪಿಂಚಣಿ ವ್ಯವಸ್ಥೆಯನ್ನೆ ಮುಂದುವರಿಸಬೇಕು ಎಂದು ಆಗ್ರಹಿಸುತ್ತೇವೆ’ ಎಂದರು.

‘ಪ್ರಾಥಮಿಕ ಶಾಲಾ ಶಿಕ್ಷಕರಿಗೂ ಸಹ ಸೇವಾ ಜೇಷ್ಠತೆಯ ಆಧಾರದ ಮೇಲೆ ಉಪ ನಿದೇರ್ಶಕರ ಹುದ್ದೆವರೆಗೂ ಮುಂಬಡ್ತಿ ನೀಡಬೇಕು. ದೈಹಿಕ ಶಿಕ್ಷಕರಿಗೂ ಬಡ್ತಿ ನೀಡಬೇಕು. 6ನೇ ವೇತನ ಆಯೋಗದ ವರದಿ ಅನುಷ್ಟಾನದಲ್ಲಿ ಶಿಕ್ಷಕರಿಗೆ ಅನ್ಯಾಯ ಮಾಡದಂತೆ ಒತ್ತಾಯಿಸುತ್ತೇವೆ’ ಎಂದು ಹೇಳಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಸಂಘಟನಾ ಕಾರ್ಯದರ್ಶಿ ಶೈಲಾ ಕುಮಾರಿ, ಗುಡಿಬಂಡೆ ತಾಲ್ಲೂಕು ಸಂಘದ ಕಾರ್ಯದರ್ಶಿ ಶ್ರೀರಾಮರೆಡ್ಡಿ, ಸಂಘದ ಸದಸ್ಯರಾದ ನಜೀರ್ ಹಾಜರಿದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !