ಸೋಮವಾರ, ಅಕ್ಟೋಬರ್ 18, 2021
28 °C

ಶಿಡ್ಲಘಟ್ಟ: ಆಯುಷ್ಮಾನ್ ಕಾರ್ಡ್ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿಡ್ಲಘಟ್ಟ: ನಗರದ ವಾಸವಿ ವಿದ್ಯಾ ಸಂಸ್ಥೆಯಲ್ಲಿ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಜನ್ಮದಿನದ ಅಂಗವಾಗಿ ನಾಗರಿಕರಿಗೆ ಉಚಿತ ಆಯುಷ್ಮಾನ್ ಭಾರತ್ ಕಾರ್ಡ್ ವಿತರಣಾ ಕಾರ್ಯಕ್ರಮಕ್ಕೆ ಮಾಜಿ ಶಾಸಕ ಎಂ.ರಾಜಣ್ಣ ಚಾಲನೆ ನೀಡಿದರು.

ಚಿಕ್ಕಬಳ್ಳಾಪುರ ಜಿಲ್ಲಾ ನೇಕಾರರ ಪ್ರಕೋಷ್ಠ, ಭಾರತೀಯ ಜನತಾ ಪಾರ್ಟಿ ಹಾಗೂ ವಿವಿಧ ಮೋರ್ಚಾಗಳ ಸಹಭಾಗಿತ್ವದಲ್ಲಿ ಉಚಿತ ಆಯುಷ್ಮಾನ್ ಭಾರತ್ ಕಾರ್ಡ್ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಿ ನಾಗರಿಕರಿಗೆ ಉಚಿತವಾಗಿ ಕಾರ್ಡ್ ನೀಡಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ನೇಕಾರರ ಪ್ರಕೋಷ್ಠದ ಸಂಚಾಲಕರಾದ ನಾಗಭೂಷಣ್, ಸಹ ಸಂಚಾಲಕರಾದ ನಾಗೇಶ್, ಒಬಿಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಂಜನೇಯಗೌಡ, ಜಿಲ್ಲಾ ಮಾಧ್ಯಮ ಪ್ರಕೋಷ್ಠ ಸಹ ಸಂಚಾಲಕರಾದ ಮಂಜು ಕಿರಣ್, ಕಾರ್ಮಿಕ ಪ್ರಕೋಷ್ಠ ಜಿಲ್ಲಾ ಸಹ ಸಂಚಾಲಕ ನರೇಶ್, ಜಿಲ್ಲಾ ಮಹಿಳಾ ಮೋರ್ಚಾ ಜಿಲ್ಲಾ ಮುಖಂಡರಾದ ಮಂಜುಳಾ ಸುರೇಶ್, ರತ್ನಮ್ಮ, ಶಾರದಮ್ಮ ಹಾಗೂ ಶಿಡ್ಲಘಟ್ಟ ತಾಲ್ಲೂಕಿನ ವಿವಿಧ ಮೋರ್ಚಾಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತು ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು