ಚಿಕ್ಕಬಳ್ಳಾಪುರ: ₹ 70 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪಿಎಸ್ಐ ಶರಣಪ್ಪ ಮತ್ತು ಎಎಸ್ಐ ಟಿ.ವೆಂಕಟೇಶ್ ಅವರ ಜಾಮೀನನ್ನು ಜಿಲ್ಲಾ ಮೂರನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ರದ್ದುಗೊಳಿಸಿದೆ.

ಮಂಗಳವಾರ (ಮಾ.3) ಸಂಜೆ ನಗರದ ಕನ್ನಡ ಭವನದ ಬಳಿ ₹ 70 ಸಾವಿರ ಲಂಚ ಪಡೆಯುವಾಗ ಎಎಸ್ಐ ವೆಂಕಟೇಶಪ್ಪ ಮತ್ತು ನಗರ ಹೊರವಲಯದ ಚಿತ್ರಾವತಿ ಬಳಿ ಶರಣಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದರು. ರಾತ್ರಿ ವಿಚಾರಣೆ ನಡೆಸಿದ್ದರು. ಬುಧವಾರ (ಮಾ.4) ಬೆಳಿಗ್ಗೆ ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದು ಅವರಿಗೆ ಜಾಮೀನು ಮಂಜೂರಾಗಿತ್ತು.|

ಹೀಗೆ ಕೆಲವೇ ಗಂಟೆಗಳಲ್ಲಿ ಜಾಮೀನು ಮಂಜೂರಾಗಿದ್ದು ನ್ಯಾಯಾಂಗ ವಲಯದಲ್ಲಿ ಚರ್ಚೆಗಳಿಗೆ ಕಾರಣವಾಗಿತ್ತು.

ಜಾಮೀನು ನೀಡಿದ್ದಕ್ಕೆ ಲೋಕಾಯುಕ್ತ ಪೊಲೀಸರು ಆಕ್ಷೇಪ ವ್ಯಕ್ತಪಡಿಸಿದ್ದರು. ಶನಿವಾರ (ಮಾ.7) ನ್ಯಾಯಾಧೀಶರಾದ ಶಾರದಾ ಅವರು ಮತ್ತೆ ಪ್ರಕರಣದ ವಿಚಾರಣೆ ನಡೆಸಿ ಸೋಮವಾರ ತೀರ್ಪು ನೀಡುವುದಾಗಿ ಪ್ರಕಟಿಸಿದ್ದರು.

ಸೋಮವಾರ ನ್ಯಾಯಾಧೀಶರು ಜಾಮೀನು ರದ್ದುಗೊಳಿಸಿದರು. ತೀರ್ಪು ಪ್ರಕಟವಾದ ವೇಳೆ ಆರೋಪಿಗಳು ನ್ಯಾಯಾಲಯದಲ್ಲಿ ಹಾಜರಿರಲಿಲ್ಲ.

ಪ್ರಕರಣ ಸಂಬಂಧ ಪಿಎಸ್ಐ ಮತ್ತು ಎಎಸ್ಐ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆಲಸದಿಂದ ಅಮಾನತುಗೊಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.