ಗುರುವಾರ , ಏಪ್ರಿಲ್ 22, 2021
25 °C

ಬಾಬೂಜಿ ಸೇವೆ ಸ್ಮರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಂತಾಮಣಿ: ‘ಹಸಿರು ಕ್ರಾಂತಿ ಹರಿಕಾರ ಬಾಬು ಜಗಜೀವನ ರಾಂ ನಿಪುಣ ಆಡಳಿತಗಾರರಾಗಿದ್ದರು’ ಎಂದು ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಎಂ.ವಿ. ರಾಮಪ್ಪ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಊಲವಾಡಿ ಗ್ರಾಮದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಡಾ.ಬಾಬು ಜಗಜೀವನ ರಾಂ ಅವರ 114ನೇ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಶೋಷಿತ ಸಮುದಾಯಗಳ ಏಳಿಗೆಗಾಗಿ ಶ್ರಮಿಸಿದ ಮಹಾನ್ ನಾಯಕ. ಲೋಕಸಭಾ ಚುನಾವಣೆಯಲ್ಲಿ ಜಯಗಳಿಸಿ ಉತ್ತಮ ಆಡಳಿತಗಾರ, ವಾಕ್ಪಟುವಾಗಿದ್ದರೂ ಪರಿಶಿಷ್ಟ ಜಾತಿಯ ಕಾರಣದಿಂದ ದೇಶದ ಪ್ರಧಾನಿ ಪಟ್ಟವನ್ನು ತಪ್ಪಿಸಲಾಯಿತು ಎಂದು ನುಡಿದರು.

ಕಾರ್ಯಕ್ರಮದಲ್ಲಿ ಮಕ್ಕಳಿಗೆ ಲೇಖನ ಸಾಮಗ್ರಿ ವಿತರಿಸಲಾಯಿತು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುನಾಥ್, ಕಾರ್ಯದರ್ಶಿ ವೆಂಕಟೇಶ್, ಪದಾಧಿಕಾರಿಗಳಾದ ನಾಗಪ್ಪ, ವೆಂಕಟರಾಯಪ್ಪ, ಸೋಮ ಶೇಖರ್, ಆಂಜನಪ್ಪ, ಆನಂದ್, ನರಸಿಂಹಪ್ಪ ಹಾಜರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.