ಬಾಗೇಪಲ್ಲಿ: ‘ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛ ಮಾಡಿಕೊಂಡು ಸೊಳ್ಳೆಗಳ ನಿಯಂತ್ರಣ ಮಾಡಿದ್ದಲ್ಲಿ, ಡೆಂಗಿಜ್ವರ ಹತೋಟಿಗೆ ಬರಲಿದೆ’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಿ.ಎನ್. ಸತ್ಯನಾರಾಯಣರೆಡ್ಡಿ ತಿಳಿಸಿದರು.

ಪಟ್ಟಣದ ಡಿವಿಜಿ ಮುಖ್ಯರಸ್ತೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಡೆಂಗಿ ನಿಮೂರ್ಲನೆ ದಿನದ ಪ್ರಯುಕ್ತ ಜನಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದರು.

ಡೆಂಗಿಜ್ವರ ಸೇರಿದಂತೆ ಅನೇಕ ರೋಗಗಳು ಬರುವ ಮುನ್ನ ಪ್ರತಿಯೊಬ್ಬರೂ ಮುನ್ನೆಚ್ಚರಿಕೆ ಕ್ರಮ ಅನುಸರಿಸಬೇಕು. ಡೆಂಗಿಜ್ವರ ವೈರಸ್ನಿಂದ ರೋಗ ಹರಡಲಿದೆ. ಸೊಳ್ಳೆ ಕಡಿತದಿಂದ ಜ್ವರದ ಲಕ್ಷಣ ಹೆಚ್ಚಾಗಲಿದೆ. ಈ ಜ್ವರಕ್ಕೆ ಲಸಿಕೆ ಇಲ್ಲದಿರುವುದರಿಂದ ಎಚ್ಚರ ವಹಿಸಬೇಕು. ತಲೆನೋವು, ಕಣ್ಣು, ಕಿವಿ, ಮತ್ತು ಮಾಂಸಖಂಡಗಳಲ್ಲಿ ವಿಪರೀತ ನೋವು ಕಂಡುಬರಲಿದೆ. ಬಾಯಿ, ಮೂಗು, ವಸಡುಗಳಲ್ಲಿ ರಕ್ತಸ್ತ್ರಾವ ಉಂಟಾಗಲಿದೆ. ರೋಗದ ಲಕ್ಷಣಗಳು ಕಂಡುಬಂದರೆ ಕೂಡಲೇ ಆಸ್ಪತ್ರೆಯಲ್ಲಿ ತುರ್ತುಚಿಕಿತ್ಸೆ ಪಡೆಯಬೇಕು. ಇಲ್ಲವಾದರೆ ಅಮೂಲ್ಯವಾದ ಪ್ರಾಣ ಕಳೆದುಕೊಳ್ಳಬೇಕಾಗುತ್ತದೆ ಎಂದರು.

ಸೊಳ್ಳೆಗಳು ಕಚ್ಚದಂತೆ ಸೊಳ್ಳೆಪರದೆ, ಗುಡ್ನೈಟ್ ಬಳಸಬೇಕು. ಮನೆ, ಚರಂಡಿಗಳು ಮತ್ತು ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛ ಮಾಡಬೇಕು. ಚರಂಡಿಗಳಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು ಎಂದು ಸಲಹೆ ನೀಡಿದರು.

ಸಾರ್ವಜನಿಕ ಆಸ್ಪತ್ರೆ ಆಡಳಿತಾಧಿಕಾರಿ ಡಾ. ವಿನಯ್ಕುಮಾರ್, ಆರೋಗ್ಯ ನಿರೀಕ್ಷಕ ಫಕೃದ್ಧೀನ್ಸಾಬ್, ಹಿರಿಯ ಶುಶ್ರೂಷಕಿ ಮಂಜುಳ, ಮಂಜುನಾಥ್, ಈಶ್ವರಪ್ಪ, ಮುನಿರತ್ನಮ್ಮ ಮತ್ತು ಶುಶ್ರೂಷಕಿಯರು, ಆಶಾ ಕಾರ್ಯಕರ್ತೆಯರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-16-1589086850

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.