ಬಾಗೇಪಲ್ಲಿ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಕಾಲೇಜಿನ ಸಾಂಸ್ಕೃತಿಕ, ಕ್ರೀಡಾ, ಎನ್ಎಸ್ಎಸ್, ರೆಡ್ ಕ್ರಾಸ್ ಮತ್ತು ಸ್ಕೌಟ್ಸ್ ಅಂಡ್ ಗೈಡ್ಸ್ ಘಟಕಗಳ ಸಂಯುಕ್ತಾಶ್ರಯದಲ್ಲಿ ಸಮಾರೋಪ ಸಮಾರಂಭ ಮತ್ತು ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮವು ಬುಧವಾರ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ, ಸರ್ಕಾರಿ ಶಾಲೆ, ಕಾಲೇಜುಗಳನ್ನು ಉಳಿಸಿ, ಬೆಳಿಸುವುದು ನಮ್ಮೆಲ್ಲರ ಜವಾಬ್ದಾರಿ. ಶಾಲೆ, ಕಾಲೇಜುಗಳ ಬಗ್ಗೆ ಕೀಳರಿಮೆ ಬೇಡ. ಶೈಕ್ಷಣಿಕ ಪ್ರಗತಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೋಟ್ಯಂತರ ಹಣ ವ್ಯಯ ಮಾಡುತ್ತಿವೆ. 1ನೇ ತರಗತಿಯಿಂದ ಪದವಿ ವಿದ್ಯಾಭ್ಯಾಸದವರೆಗೆ ಉಚಿತ ಶಿಕ್ಷಣ ನೀಡಲಾಗುತ್ತಿದೆ. ವಿದ್ಯಾರ್ಥಿ ನಿಲಯಗಳು, ಪಠ್ಯಪುಸ್ತಕ, ವಿದ್ಯಾಥಿ ವೇತನ, ಆರೋಗ್ಯ ಪರೀಕ್ಷೆಯನ್ನು ಉಚಿತವಾಗಿ ಮಾಡಲಾಗುತ್ತಿದೆ ಎಂದು ಹೇಳಿದರು.

ಸರ್ಕಲ್ ಇನ್ಸ್ಪೆಕ್ಟರ್ ಅಜಯ್ ಸಾರಥಿ ಮಾತನಾಡಿ, ಹದಿ ಹರೆಯದ ಯುವಕರು ಕೆಟ್ಟ ಚಟಗಳಿಗೆ ಒಳಗಾಗಿ, ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಮಾದಕ ದ್ರವ್ಯ ಸೇವನೆಗಳಿಂದ, ಪ್ರೀತಿ, ಪ್ರೇಮ, ಮೋಹಗಳಿಗೆ ಬಲಿಯಾಗಬಾರದು ಎಂದು ಸಲಹೆ ನೀಡಿದರು.

ವಿವಿಧ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಜಯಶಾಲಿಯಾದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪದಕ, ಪಾರಿತೋಷಕ, ಪ್ರಶಸ್ತಿ ಪತ್ರ ವಿತರಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಅಂತಿಮ ವರ್ಷದ ಪದವಿ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಗಣ್ಯರು ಪದವಿ ಪ್ರದಾನ ಮಾಡಿದರು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಮನೀಷಾ ಎನ್. ಪತ್ರಿ, ಎಚ್.ಎಸ್.ನರೇಂದ್ರ, ಡಿ.ಎನ್.ಕೃಷ್ಣಾರೆಡ್ಡಿ, ಪ್ರೊ.ವೈ. ನಾರಾಯಣ, ಡಾ.ಸಿ.ಎಸ್. ವೆಂಕಟರಾಮರೆಡ್ಡಿ, ತಾಜ್ ಉನ್ನೀಸ, ಇಮ್ರಾನ್ ಭಾಷಾ, ರೂಪಾಪೈ, ನಂಜಿರೆಡ್ಡಿ, ಪ್ರಾಧ್ಯಾಪಕರಾದ ಡಾ.ಪಂಚಾಂಗಂ ಹರಿಕುಮಾರ್, ಡಾ.ನಾಗರಾಜ್, ಪೂರ್ಣಂಕುವರ್, ಕೆ.ಶೇಖರ್, ಮುನಿಕೃಷ್ಣಪ್ಪ, ಓಬಳರೆಡ್ಡಿ, ಗಂಗಾಧರ್, ಗಂಗಾಧರಪ್ಪ, ಶಿವಕುಮಾರ್, ಬೇಬಿ ಆಯಿಷಾ, ಸೌಭಾಗ್ಯ, ಅಧೀಕ್ಷಕ ಚಿನ್ನಪ್ಪ, ಗಂಗರಾಜು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-16-1490151886

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.