ಬಾಗೇಪಲ್ಲಿ: ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ ಅವರ 74ನೇ ಜನ್ಮ ದಿನಾಚರಣೆ ಅಂಗವಾಗಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ತಾಲ್ಲೂಕು ಸಮಿತಿ, ಸಾರ್ವಜನಿಕ ಆಸ್ಪತ್ರೆ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು.

ಸಿಪಿಎಂ ಮುಖಂಡರು, ಜಿವಿಎಸ್ ಅಭಿಮಾನಿಗಳು, ಸಾರ್ವಜನಿಕರು, ವಿವಿಧ ಸಂಘಟನೆಗಳ 80ಕ್ಕೂ ಹೆಚ್ಚು ಜನ ರಕ್ತದಾನ ಮಾಡಿದರು.

ಡಿವೈಎಫ್ಐ ಜಿಲ್ಲಾ ಅಧ್ಯಕ್ಷ ಹರೀಶ್ ಮಾತನಾಡಿ, ಜಿ.ವಿ.ಶ್ರೀರಾಮರೆಡ್ಡಿ ಕ್ಷೇತ್ರ ಮಾತ್ರ ಅಲ್ಲದೇ ರಾಜ್ಯದ ಕೃಷಿಕೂಲಿಕಾರ್ಮಿಕರ, ಶೋಷಿತರ, ಕೋಮು ಸೌಹಾರ್ದತೆಗೆ ಧಕ್ಕೆ ತಂದರೆ ಮತ್ತು ಜನ ವಿರೋಧಿನೀತಿಗಳ ವಿರುದ್ಧ ಹೋರಾಟ ಮಾಡಿದ್ದಾರೆ. ಜಿವಿಎಸ್ ಹೆಸರಿನಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ. 80ಕ್ಕೂ ಹೆಚ್ಚು ಮಂದಿ ಜನರು ರಕ್ತದಾನ ಮಾಡಿದ್ದಾರೆ ಎಂದರು.

ಭಾರತೀಯ ರೆಡ್ಕ್ರಾಸ್ ಸಂಸ್ಥೆ ತಾಲ್ಲೂಕು ಕಾರ್ಯದರ್ಶಿ ಎ.ಜಿ.ಸುಧಾಕರ್ ಮಾತನಾಡಿ, ಜಿಲ್ಲೆಯಲ್ಲಿ ರಕ್ತದ ಮಾದರಿಗಳ ಕೊರತೆ ಇದೆ. ರಕ್ತಗಳ ಗುಂಪುಗಳನ್ನು ಸಂಗ್ರಹ ಆಗಬೇಕಾದರೆ ತಾಲ್ಲೂಕು ಮತ್ತು ಗ್ರಾಮಗಳಲ್ಲಿ ರಕ್ತದಾನ ಶಿಬಿರ ಹೆಚ್ಚಾಗಬೇಕು. ಸಂಘ ಸಂಸ್ಥೆಯವರು, ದಾನಿಗಳು, ರಾಜಕೀಯ ಪಕ್ಷಗಳ ಮುಖಂಡರು ರಕ್ತದಾನ ಶಿಬಿರ ಹಮ್ಮಿಕೊಳ್ಳಬೇಕು ಎಂದರು.

ರಕ್ತದಾನದ ಜೊತೆ ಅನ್ನದಾನ ಹಮ್ಮಿಕೊಳ್ಳಲಾಗಿತ್ತು. ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಶ್ರೀನಿವಾಸ್, ಜಿಲ್ಲಾ ಸಂಚಾಲಕ ರಾಜಶೇಖರ್, ತಾಲ್ಲೂಕು ಸಂಚಾಲಕ ಸುರೇಶಮದಕರಿ, ಸದಸ್ಯ ನಂದೀಶ, ಈಶ್ವರ, ಗಣೇಶ್, ಆನಂದ್, ಹುಸೇನ್, ಈರಪ್ಪ, ಎ.ಸೋಮಶೇಖರ, ಎಸ್ಎಫ್ಐ ಮುಖಂಡ ಜಿ.ಸೋಮಶೇಖರ, ಎಂ.ಪಿ.ಮುನಿವೆಂಕಟಪ್ಪ, ಚನ್ನರಾಯಪ್ಪ, ದೇವಿಕುಂಟೆಶ್ರೀನಿವಾಸ್, ಡಿ.ಟಿ.ಶ್ರೀನಿವಾಸ್, ಅಶ್ವತ್ಥಪ್ಪ, ಜಿ.ಕೃಷ್ಣಪ್ಪ, ಗುಡಿಬಂಡೆ ಶ್ರೀನಿವಾಸ್, ರೆಡ್ಕ್ರಾಸ್ ಸಂಸ್ಥೆಯ ಜಿಲ್ಲಾ ಕಾರ್ಯದರ್ಶಿ ಬಿ.ಎನ್.ರವಿಕುಮಾರ್, ವೈದ್ಯಾಧಿಕಾರಿ ಡಾ.ವಿ.ರಿಜ್ವಾರ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-16-1260724114

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.