ಬಾಗೇಪಲ್ಲಿ: ‘ಸಕಾಲಕ್ಕೆ ಬಂದು ಚಿಕಿತ್ಸೆ ನೀಡದ ಕಾರಣ ರೋಗಿಗಳು ಮೃತಪಟ್ಟಿದ್ದಾರೆ’ ಎಂದು ಇಲ್ಲಿನ ತಾಲ್ಲೂಕು ಸರ್ಕಾರಿ ಆಸ್ಪತ್ರೆಯ ವೈದ್ಯರ ವಿರುದ್ಧ ಮೃತರ ಕುಟುಂಬ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಲ್ಲೂಕಿನ ಗೂಳೂರು ಹೋಬಳಿಯ ಡಿ. ಕೊತ್ತಪಲ್ಲಿ ಗ್ರಾಮದ ವೆಂಕಟಮ್ಮ (52) ಮತ್ತು ಮೈನಗಾನಪಲ್ಲಿ ಗ್ರಾಮದ ವೇಣುಗೋಪಾಲ (59) ಮೃತರು.

ಡಿ.ಕೊತ್ತಪಲ್ಲಿ ವೆಂಕಟಮ್ಮ ಅನಾರೋಗ್ಯದ ಕಾರಣ ಚಿಕಿತ್ಸೆ ಪಡೆಯಲು ಮಂಗಳವಾರ ರಾತ್ರಿ ಆಸ್ಪತ್ರೆಗೆ ಬಂದಿದ್ದರು. ಅದೇ ಸಮಯದಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದ ಮೈನಗಾನಹಳ್ಳಿಯವೇಣುಗೋಪಾಲ ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ಕರೆ ತಂದಿದ್ದರು.

‘ನಾವು ಆಸ್ಪತ್ರೆಗೆ ಬಂದ ವೇಳೆ ವೈದ್ಯರು ಇರಲಿಲ್ಲ. ವೈದ್ಯರಿಲ್ಲದ ಕಾರಣ ಅವರಿಗೆ ಚಿಕಿತ್ಸೆ ಸಿಗದೆ ಮೃತಪಟ್ಟಿದ್ದಾರೆ. ಸಕಾಲದಲ್ಲಿ ಚಿಕಿತ್ಸೆ ಲಭ್ಯವಾಗಿದ್ದರೆ ಬದುಕುತ್ತಿದ್ದರು’ ಎಂದು ಎರಡೂ ಕುಟುಂಬಗಳ ಸದಸ್ಯರು ಆಕ್ರೋಶ ಹೊರಹಾಕಿದರು.

ಈ ಘಟನೆಯ ಹಿನ್ನೆಲೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶಿಲ್ಪಾ ಅವರು ಗುರುವಾರ ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

ರಾತ್ರಿ ಪಾಳಿ ವೈದ್ಯರು, ಆಸ್ಪತ್ರೆ ಆಡಳಿತಾಧಿಕಾರಿ ಡಾ.ವಿನಯ್, ಪ್ರಭಾರ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸುಜಿತ್ ಅವರಿಂದ ಮೃತಪಟ್ಟವರ ಚಿಕಿತ್ಸೆ ವಿವರ ಪಡೆದರು.

ಬಾಗೇಪಲ್ಲಿ ಜೆಎಂಎಫ್ಸಿ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಡಿ.ಕೆ. ಮಂಜುನಾಥಚಾರಿ,ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ವಿನಯ್, ವೈದ್ಯ ಡಾ.ಮುರಕ್, ಹಿರಿಯ ಶುಶ್ರೂಷಕಿ ಮಂಜುಳ ಮತ್ತಿತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-16-1970076759

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.