ಬಾಗೇಪಲ್ಲಿ: ತಾಲ್ಲೂಕಿನ ಜನರು ಕನ್ನಡ ಭಾಷೆಯಲ್ಲಿ ಮಾತನಾಡಿ, ಕನ್ನಡ ಭಾಷೆಯಲ್ಲಿ ವ್ಯವಹರಿಸಬೇಕು ಎಂದು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಚಿನ್ನಕೈವಾರಮಯ್ಯ ಹೇಳಿದರು.

ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ನ ಕಚೇರಿಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕನ್ನಡ ಸಾಹಿತ್ಯ ಪರಿಷತ್ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದರು.

ತೆಲುಗು ಭಾಷೆಯಲ್ಲಿ ಮಾತಾಡುತ್ತಿದ್ದ ತಾಲ್ಲೂಕಿನಲ್ಲಿ ಕನ್ನಡ ಕಲಾ ಸಂಘ, ಕನ್ನಡ ಸಾಹಿತ್ಯ ಪರಿಷತ್ನ ಮೂಲಕ ಎಸ್.ವಿ.ಕೃಷ್ಣಮೂರ್ತಿ, ಉದಯ್ಕುಮಾರ್, ನಾಗರಾಜ್, ನಯಾಜ್ಅಹಮದ್, ಶ್ರೀರಾಮಚಂದ್ರಮೂರ್ತಿ, ಕರವೇ ಚಂದ್ರಶೇಖರ್ ಸೇರಿದಂತೆ ಅನೇಕ ಕಲಾವಿದರು, ನಾಟಕಕಾರರು, ಸಾಹಿತಿಗಳು, ಹೋರಾಟಗಾರರು ಕನ್ನಡ ಭಾಷೆ ಉಳಿಸಿ ಬೆಳೆಸಿದ್ದಾರೆ. ಕನ್ನಡದ ನಾಟಕ ಪ್ರದರ್ಶನ ಮಾಡಿ ಜನಜಾಗೃತಿ ಮೂಡಿಸಿದ್ದಾರೆ. ಸರ್ಕಾರಿ, ಖಾಸಗಿ ಕಚೇರಿಗಳಲ್ಲಿ, ಬ್ಯಾಂಕ್ಗಳಲ್ಲಿ ಮತ್ತು ಮನೆಗಳಲ್ಲಿ ಸಾರ್ವಜನಿಕರು ಕನ್ನಡ ಭಾಷೆಯಲ್ಲಿ ವ್ಯವಹರಿಸುವಂತೆ ಮನವಿ ಮಾಡಿದರು.

ಕನ್ನಡ ಸಾಹಿತ್ಯ ಪರಿಷತ್ನಲ್ಲಿ ವಿದೇಶದವರು ಸಹ ಸದಸ್ಯತ್ವ ಪಡೆದಿದ್ದಾರೆ. ಕನ್ನಡ ಭಾಷೆ, ನೆಲ, ಜಲ, ಸಾಹಿತ್ಯ, ಕನ್ನಡಿಗರ ಬದುಕು, ಅಸ್ತಿತ್ವ ಉಳಿಸಲು ಕವಿ, ಸಾಹಿತಿಗಳು ತಮ್ಮ ಬರಹಗಳ ಮೂಲಕ ಜಾಗೃತಿ ಮೂಡಿಸಿದ್ದಾರೆ. ರಾಜ್ಯದಲ್ಲಿ ಕನ್ನಡಿಗರೇ ಸಾರ್ವಭೌಮ ಎಂದು ಕನ್ನಡಪರ ಹೋರಾಟಗಾರರು ಬೀದಿಗಿಳಿದು ಹೋರಾಟ ಮಾಡಿದ್ದಾರೆ. ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಸಿಗಬೇಕು. ರೈಲ್ವೆ ಇಲಾಖೆ ಪರೀಕ್ಷೆಗಳನ್ನು ಕನ್ನಡ ಭಾಷೆಯಲ್ಲಿ ಬರೆಸಬೇಕು ಎಂದರು.

ಶಿಕ್ಷಕಿ ವಿ.ಸುಕನ್ಯಾ, ನಿವೃತ್ತ ಶಿಕ್ಷಕ ಪಿ.ಜಿ.ಶಿವಶಂಕರಾಚಾರಿ ಕನ್ನಡ ಗೀತೆಗಳನ್ನು ಮತ್ತು ಚನ್ನರಾಯಪ್ಪ ಕ್ರಾಂತಿಗೀತೆ ಹಾಡಿದರು.

ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಲಿಭಾಷ, ಪರಿಷತ್ನ ಗೌರವ ಕಾರ್ಯದರ್ಶಿ ಬಾಣಾಲಪಲ್ಲಿ ಶ್ರೀನಿವಾಸ್, ಎಚ್.ಆರ್.ಸುಬ್ರಮಣ್ಯಂ, ಈಶ್ವರಪ್ಪ, ಚೌಡಪ್ಪ, ಶ್ರೀನಿವಾಸತಂತ್ರಿ, ರಾಜರಾಜೇಶ್ವರಿ, ಕರವೇ ಜಬೀವುಲ್ಲಾ, ಬಾಬಾಜಾನ್, ಸಾಯಿಜ್ಯೋತಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-16-231203560

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.