ಬಾಗೇಪಲ್ಲಿ: ಕೇಂದ್ರ ಸರ್ಕಾರವು ವಿಬಿಜಿ ರಾಮ್ ಜಿ ಕಾಯ್ದೆ ವಾಪಸ್ ಪಡೆದು, ಮನರೇಗಾ ಯೋಜನೆಯನ್ನೇ ಮುಂದುವರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ, ಕೃಷಿ ಮತ್ತು ಕೂಲಿ ಕಾರ್ಮಿಕರ ಸಂಘ, ಸಿಐಟಿಯು ಮತ್ತು ದಲಿತ ಹಕ್ಕುಗಳ ಸಮಿತಿಗಳ ನೇತೃತ್ವದಲ್ಲಿ ಇದೇ 15ರಂದು ತಾಲ್ಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಪ್ರಾಂತ ರೈತ ಸಂಘದ ತಾಲ್ಲೂಕು ಕಾರ್ಯದರ್ಶಿ ಡಿ.ಟಿ. ಮುನಿಸ್ವಾಮಿ ತಿಳಿಸಿದರು.

ಎಲ್ಲ ಅರ್ಹ ಫಲಾನುಭವಿಗಳಿಗೆ ಭೂಮಿ, ವಸತಿ ಕಲ್ಪಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಲಾಗುವುದು ಎಂದು ಮುನಿಸ್ವಾಮಿ ತಿಳಿಸಿದರು.

ತಾಲ್ಲೂಕು ಪತ್ರಕರ್ತರ ಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಈ ಹಿಂದಿನ ಯುಪಿಎ ಸರ್ಕಾರವು ಬಡವರು ಮತ್ತು ಕೂಲಿ ಕಾರ್ಮಿಕರಿಗೆ ನೆರವಾಗುವ ನಿಟ್ಟಿನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯನ್ನು ಜಾರಿಗೆ ತಂದಿತ್ತು. ಈ ಯೋಜನೆಯಡಿ 100 ದಿನಗಳ ಕೆಲಸ ಮತ್ತು ಕೂಲಿ ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುತ್ತಿತ್ತು. ಇದು ಬಡವರಿಗೆ ಆರ್ಥಿಕವಾಗಿ ಶಕ್ತಿ ತುಂಬಿತ್ತು ಎಂದು ಹೇಳಿದರು.

ಈ ಯೋಜನೆಯಡಿ ಕೆರೆ, ಕುಂಟೆ, ಕಾಲುವೆಗಳು, ಗೋಕುಂಟೆಗಳನ್ನು ಸ್ವಚ್ಛಗೊಳಿಸಲಾಗಿತ್ತು. ಇದರಿಂದ ನೀರು ಸಂಗ್ರಹವಾಗಿ ಅಂತರ್ಜಲದ ಮಟ್ಟವೂ ಸುಧಾರಣೆ ಕಂಡಿತ್ತು. ಆದರೆ, ಇದೀಗ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ವಿಬಿಜಿ ರಾಮ್ ಜಿ ಕಾಯ್ದೆ ಜಾರಿಗೆ ಮುಂದಾಗಿದೆ. ಇದು ಬಡವರು ಮತ್ತು ಕೂಲಿ ಕಾರ್ಮಿಕರಿಗೆ ಮರಣ ಶಾಸನವಾಗಿದೆ. ಈ ಕಾಯ್ದೆ ಜಾರಿಯಾದಲ್ಲಿ ಈ ಯೋಜನೆಗೆ ಕೇಂದ್ರ ಸರ್ಕಾರವು ಶೇ 60ರಷ್ಟು ಮತ್ತು ಆಯಾಯ ರಾಜ್ಯಗಳು ಶೇ 40ರಷ್ಟು ಅನುದಾನ ನೀಡಬೇಕಿದೆ. ಈಗಾಗಲೇ ಸಂಕಷ್ಟದಲ್ಲಿರುವ ರಾಜ್ಯ ಸರ್ಕಾರಗಳ ಮೇಲೆ ವಿಬಿಜಿ ರಾಮ್ ಜಿ ಕಾಯ್ದೆಯಿಂದ ಮತ್ತಷ್ಟು ಹೊರೆಯಾಗಲಿದೆ ಎಂದರು.

ಬಡವರು ಭೂಮಿ ಮತ್ತು ವಸತಿ ಕಲ್ಪಿಸಲು ಕೋರಿ 20 ವರ್ಷಗಳಾಗಿದೆ. ಆದರೆ, ಈವರೆಗೆ ಒಬ್ಬ ಫಲಾನುಭವಿಗೂ ಭೂಮಿ, ವಸತಿ ಕಲ್ಪಿಸಿಲ್ಲ. ಆನ್ಲೈನ್ನಲ್ಲಿ ಅರ್ಜಿ ಹಾಕಲು ತಿಳಿಸಲಾಗುತ್ತದೆ. ಆದರೆ, ವಸತಿ ಮಾತ್ರ ವಿತರಣೆಯಾಗಿಲ್ಲ. ಬಗರ್ಹುಕುಂ, ಸಾಗುವಳಿ ಚೀಟಿ ವಿತರಣೆ ಮಾಡಿಲ್ಲ. ಈ ಎಲ್ಲ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.

ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಟನೆ ತಾಲ್ಲೂಕು ಕಾರ್ಯದರ್ಶಿ ಎ. ಸೋಮಶೇಖರ ಮಾತನಾಡಿ, ಶ್ರೀಮಂತರು, ಕಾರ್ಪೊರೇಟ್ ಕಂಪನಿಗಳ ಕೋಟ್ಯಂತರ ರೂಪಾಯಿ ಸಾಲ ಮನ್ನಾ ಮಾಡುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಬಡ ಜನರ ಕಲ್ಯಾಣದ ಚಿಂತೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿಐಟಿಯು ತಾಲ್ಲೂಕು ಕಾರ್ಯದರ್ಶಿ ಜಿ.ಮುಸ್ತಾಫ ಮಾತನಾಡಿ, ಕೇಂದ್ರ ಸರ್ಕಾರ ಕಾರ್ಮಿಕರ ಹಕ್ಕುಗಳನ್ನು ಹಂತ ಹಂತವಾಗಿ ಕಸಿಯುವ ಯತ್ನ ಮಾಡುತ್ತಿದೆ ಎಂದು ದೂರಿದರು.

ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘದ ಜಿಲ್ಲಾ ಉಪಾಧ್ಯಕ್ಷ ಚಂಚುರಾಯನಪಲ್ಲಿ ಕೃಷ್ಣಪ್ಪ ಮಾತನಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಾಂತ ರೈತ ಸಂಘದ ತಾಲ್ಲೂಕು ಖಜಾಂಚಿ ಟೌನ್ಕೃಷ್ಣಪ್ಪ, ದಲಿತ ಹಕ್ಕುಗಳ ಸಮಿತಿ ಮುಖಂಡ ಅಶ್ವಥ್ಥಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-16-1566743007

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.