ಬಾಗೇಪಲ್ಲಿ: ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ಕೇಂದ್ರ ಸರ್ಕಾರವು ಹಿಂಪಡೆಯಬೇಕು. ಎಲ್ಲ ಬಡವರಿಗೆ ನಿವೇಶನ, ವಸತಿ ಸೌಲಭ್ಯ ಕಲ್ಪಿಸಬೇಕು ಹಾಗೂ ಭೂಮಿಗಳಿಗೆ ಹಕ್ಕುಪತ್ರಗಳನ್ನು ನೀಡಬೇಕು ಎಂದು ಒತ್ತಾಯಿಸಿ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳ ಎದುರು ಶುಕ್ರವಾರ ಪ್ರತಿಭಟನೆ ನಡೆಯಿತು.

ಕರ್ನಾಟಕ ಪ್ರಾಂತ ರೈತ ಸಂಘ, ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘ, ಸಿಐಟಿಯು ಮತ್ತು ದಲಿತ ಹಕ್ಕುಗಳ ಸಮಿತಿ ಪದಾಧಿಕಾರಿಗಳು ಮತ್ತು ಕೃಷಿ ಕೂಲಿ ಕಾರ್ಮಿಕರು ಈ ಪ್ರತಿಭಟನೆ ನಡೆಸಿದರು.

ಕೂಲಿ ಕಾರ್ಮಿಕರ ವಿರೋಧಿ ವಿಬಿ ಜಿ ರಾಮ್ ಜಿ ಕಾಯ್ದೆ ಜಾರಿ ಮಾಡಿದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನಕಾರರು ಧಿಕ್ಕಾರ ಕೂಗಿದರು. ಈ ಸಂಬಂಧ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಿದರು.

ಕರ್ನಾಟಕ ಪ್ರಾಂತ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘದ ರಾಜ್ಯ ಉಪಾಧ್ಯಕ್ಷ ಎಂ.ಪಿ. ಮುನಿವೆಂಕಟಪ್ಪ ಮಾತನಾಡಿ, ಕೇಂದ್ರ ಸರ್ಕಾರವು ಗ್ರಾಮೀಣ ಬಡವರಿಗೆ ಸಂವಿಧಾನಬದ್ಧ ಉದ್ಯೋಗದ ಹಕ್ಕು ಕಲ್ಪಿಸಲು ಮನರೇಗಾ ಜಾರಿ ಮಾಡಿತ್ತು. ಇದು ಬಡವರ ಬದುಕಿಗೆ ಆಸರೆಯಾಗಿತ್ತು. ಆದರೆ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಏಕಾಏಕಿ ಮನರೇಗಾ ಯೋಜನೆ ರದ್ದು ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಶ್ರೀಮಂತರು ಮತ್ತು ಕಾರ್ಪೊರೇಟ್ ಕಂಪನಿಗಳ ಗುಲಾಮ ಕೇಂದ್ರ ಸರ್ಕಾರವು ವಿಬಿ ಜಿರಾಮ್ ಜಿ ಕಾಯ್ದೆ ಜಾರಿ ಮಾಡಿದೆ. ಇದು ಬಡಜನರ ವಿರೋಧಿ. ಜನರ ಹಕ್ಕುಗಳನ್ನು ಕಸಿಯುವ ಮತ್ತು ಬಡವರಿಗೆ ಉದ್ಯೋಗ ಇಲ್ಲದಂತೆ ಮಾಡಲಿದೆ’ ಎಂದರು.

ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಮುಖಂಡ ಚನ್ನರಾಯಪ್ಪ ಮಾತನಾಡಿ, ವಿಬಿ ಜಿ ರಾಮ್ ಜಿ ಕಾಯ್ದೆಯು ಬಡ ಕೂಲಿಕಾರ್ಮಿಕರ ಉದ್ಯೋಗದ ಹಕ್ಕು ಕಸಿಯಲಿದೆ. ಮನರೇಗಾ ಯೋಜನೆಯಲ್ಲಿ ಅನೇಕ ತಿದ್ದುಪಡಿ ಮಾಡಲಾಗಿದೆ. ಕೇವಲ ಶ್ರೀಮಂತರು, ಬಂಡವಾಳ ಶಾಹಿಗಳಿಗೆ ಅನುಕೂಲ ಮಾಡಲು ವಿಬಿ ಜಿ ರಾಮ್ ಜಿ ಕಾಯ್ದೆ ಜಾರಿ ಮಾಡಲಾಗಿದೆ ಎಂದರು.

ಸಿಐಟಿಯು ತಾಲ್ಲೂಕು ಕಾರ್ಯದರ್ಶಿ ಜಿ.ಮುಸ್ತಾಫ ಮಾತನಾಡಿ, ಕಾರ್ಮಿಕರ ಕಾನೂನು ರದ್ದುಗೊಳಿಸಿ, ಬಂಡವಾಳಶಾಹಿ ಪರ ಕಾನೂನು ಜಾರಿ ಮಾಡಲು ಕಾರ್ಮಿಕರ ನಾಲ್ಕು ಸಂಹಿತೆಗಳನ್ನು ಜಾರಿಗೆ ತಂದಿದೆ ಎಂದು ದೂರಿದರು.

ಪ್ರಾಂತ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘದ ಎಂ.ಎನ್.ರಘುರಾಮರೆಡ್ಡಿ, ಪ್ರಾಂತ ರೈತ ಸಂಘದ ಅಧ್ಯಕ್ಷ ಡಿ.ಸಿ.ಶ್ರೀನಿವಾಸ್, ಡಿ.ಟಿ.ಮುನಿಸ್ವಾಮಿ, ಚಂಚುರಾಯನಪಲ್ಲಿಕೃಷ್ಣಪ್ಪ, ಟೌನ್ಕೃಷ್ಣಪ್ಪ, ವಾಲ್ಮೀಕಿ ಅಶ್ವತ್ಥಪ್ಪ, ಕೆ.ಮುನಿಯಪ್ಪ, ಎಚ್.ಎ.ರಾಮಲಿಂಗಪ್ಪ, ಎ.ಸೋಮಶೇಖರ, ನರಸಿಂಹರೆಡ್ಡಿ, ಇಮ್ರಾನ್, ಶ್ರೀನಿವಾಸರೆಡ್ಡಿ, ರಾಮಾಂಜಿ ಹಾಗೂ ಅಂಗನವಾಡಿ ನೌಕರರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-16-1856381807

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.