ಬಾಗೇಪಲ್ಲಿ: ತಾಲ್ಲೂಕಿನ ಕಸಬಾ ಹೋಬಳಿಯ ಘಂಟಂವಾರಿಪಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಶಾಪುರ, ಅಬಕವಾರಿಪಲ್ಲಿ, ಗೌನಿಪಲ್ಲಿ, ಪೂಲಗೂರಪಲ್ಲಿ ಗ್ರಾಮಗಳಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಗುರುವಾರ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಅವರು, ‘ಬೇಸಿಗೆಯಲ್ಲಿ ನೀರಿನ ಅಭಾವ ಇರುವುದರಿಂದ, ನೀರನ್ನು ವೃಥಾ ವ್ಯರ್ಥ ಮಾಡದೆ ಮಿತವಾಗಿ ಬಳಕೆ ಮಾಡಬೇಕು. ಜಲ ಮೂಲಗಳಾದ ಕೆರೆ, ಕುಂಟೆ, ಕಾಲುವೆ, ರಾಜಕಾಲುವೆಗಳ ಒತ್ತುವರಿ ತೆರವು ಆಗಬೇಕು. ಕೆರೆ, ಕುಂಟೆ ಸೇರಿದಂತೆ ನೀರಿನ ಮೂಲಗಳನ್ನು ರಕ್ಷಿಸಬೇಕು. ಮುಂಗಾರು, ಹಿಂಗಾರು ಮಳೆ ಕೈಕೊಟ್ಟಿರುವುದರಿಂದ, ನೀರು ಸಿಗುತ್ತಿಲ್ಲ. ಇರುವ ನೀರನ್ನು ವ್ಯರ್ಥವಾಗದಂತೆ ಎಚ್ಚರ ವಹಿಸಬೇಕು. ಶುದ್ಧ ಕುಡಿಯುವ ನೀರಿನ ಘಟಕಗಳ ಮೂಲಕ ಗ್ರಾಮಗಳ ಜನರಿಗೆ ಶುದ್ಧ ಕುಡಿಯುವ ನೀರು ಕಲ್ಪಿಸುವ ಗುರಿ ಇದೆ’ ಎಂದರು.

ಇತ್ತೀಚಿನ ದಿನಗಳಲ್ಲಿ ಕೃಷಿ ಹೊಂಡಕ್ಕೆ ಬಿದ್ದು ಮೃತಪಡುವವರ ಸಂಖ್ಯೆ ಹೆಚ್ಚಾಗಿದೆ. ಕೃಷಿ ಹೊಂಡಗಳಿಗೆ ಮಕ್ಕಳು ಮತ್ತು ಜನರು ಇಳಿಯದಂತೆ ಎಚ್ಚರ ವಹಿಸಬೇಕು. ಬಾಗೇಪಲ್ಲಿ, ಗುಡಿಬಂಡೆ, ಚೇಳೂರು ತಾಲ್ಲೂಕುಗಳಲ್ಲಿನ ಕೃಷಿಹೊಂಡಗಳಿಗೆ ಮಾಲೀಕರು ಬೇಲಿ ಹಾಕಬೇಕು. ಮಕ್ಕಳನ್ನು ಕೆರೆ, ಕುಂಟೆ, ಬಾವಿಗಳಲ್ಲಿ ಇಳಿಯದಂತೆ ಪೋಷಕರು ಎಚ್ಚರ ವಹಿಸಬೇಕು ಎಂದರು.

ಜಿಲ್ಲಾ ಪಂಚಾಯಿತಿ ಕುಡಿಯುವ ನೀರು ಶಾಖೆಯ ಎಇಇ ಮಹೇಶ್, ಘಂಟಂವಾರಿಪಲ್ಲಿ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಎನ್.ವೆಂಕಟೇಶಪ್ಪ, ಅಭಿವೃದ್ಧಿ ಅಧಿಕಾರಿ ಭಾಗ್ಯಲಕ್ಷ್ಮಿ, ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಸ್.ನರೇಂದ್ರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-16-414539899

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.