ಬಾಗೇಪಲ್ಲಿ: ತಾಲ್ಲೂಕಿನ ದೇವರೆಡ್ಡಿಪಲ್ಲಿ ಗ್ರಾಮದಲ್ಲಿ ಆಹಾರ ಸೇವಿಸಿ ಎಂಟು ಜನರು ಅಸ್ವಸ್ಥಗೊಂಡಿದ್ದಾರೆ. ಇವರಲ್ಲಿ ಮೂವರ ಪರಿಸ್ಥಿತಿ ಗಂಭೀರವಾಗಿದೆ.

ದೇವರೆಡ್ಡಿಪಲ್ಲಿ ಗ್ರಾಮದ ಒಂದೇ ಕುಟುಂಬದ ಮದ್ದರೆಡ್ಡಿ, ಭಾಗ್ಯಮ್ಮ, ಮಣಿ, ಸುಬ್ರಮಣಿ, ಈಶ್ವರಮ್ಮ, ಮದ್ದಕ್ಕ, ಮಂಜುನಾಥ್, ಭಾನು ಅಸ್ವಸ್ಥಗೊಂಡವರು.

ಅಸ್ವಸ್ಥರನ್ನು ಬಾಗೇಪಲ್ಲಿ ಹಾಗೂ ಚಿಕ್ಕಬಳ್ಳಾಪುರ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಹಳೆ ವೈಷಮ್ಯದ ಹಿನ್ನಲೆಯಲ್ಲಿ ಎರಡು ಕುಟುಂಬಗಳ ನಡುವೆ ದ್ವೇಷವಿತ್ತು. ಆದ್ದರಿಂದ ಸಾಂಬಾರ್ಗೆ ವಿಷ ಹಾಕಲಾಗಿದೆ ಎನ್ನುವ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ಭೇಟಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.