ಬಾಗೇಪಲ್ಲಿ: ಚಿಕ್ಕಬಳ್ಳಾಪುರದ ಪ್ರಜಾಸೌಧದ ಹೊರಭಾಗದಲ್ಲಿ ಚಳವಳಿ ಮತ್ತು ಪ್ರತಿಭಟನೆ ಹಮ್ಮಿಕೊಳ್ಳಲು 10 ದಿನಗಳ ಮುಂಚಿತವಾಗಿಯೇ ಅನುಮತಿ ಪಡೆಯಬೇಕು ಎಂಬ ಜಿಲ್ಲಾಧಿಕಾರಿ ಹೊರಡಿಸಿದ ಸುತ್ತೋಲೆಯು ಸರ್ವಾಧಿಕಾರಿ ಧೋರಣೆ ಎಂದು ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಎಂ.ಪಿ. ಮುನಿವೆಂಕಟಪ್ಪ ತಿಳಿಸಿದ್ದಾರೆ.

ಶುಕ್ರವಾರ ಪತ್ರಿಕಾ ಪ್ರಕಟಣೆ ನೀಡಿದ ಅವರು, ಜಿಲ್ಲಾಧಿಕಾರಿಗಳ ಸುತ್ತೋಲೆಯಲ್ಲಿ ತಿಳಿಸಿದಂತೆ ಪ್ರಜಾಸೌಧವು ಪ್ರಜೆಗಳ ಆಗುಹೋಗುಗಳು, ಸಮಸ್ಯೆಗಳ ಪರಿಹಾರದ ಸೌಧವೇ ಆಗಿದೆ. ಆಡಳಿತ ಯತ್ರಾಂಗದ ಭ್ರಷ್ಟಾಚಾರದ ವಿರುದ್ಧ ಜನಸಾಮಾನ್ಯರು ಹೋರಾಟ ಮಾಡಲು ಸಂವಿಧಾನವು ಹಕ್ಕು ನೀಡಿದೆ. ಜನಸಾಮಾನ್ಯರಿಗೆ ನ್ಯಾಯ ಒದಗಿಸುವ ಬದಲು ನ್ಯಾಯ ಕೇಳಿ ಬರುವವರ ಮೇಲೆಯೇ ಕ್ರಮ ಕೈಗೊಳ್ಳುವ ಜಿಲ್ಲಾಧಿಕಾರಿಗಳು ಹೊರಡಿಸಿದ ಸುತ್ತೋಲೆಯು ಖಂಡನೀಯ. ಈ ಸುತ್ತೋಲೆಯನ್ನು ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.